ಬಳ್ಳಾರಿ

ಸುದ್ದಿ ಸಂಕ್ಷೇಪ

Published On :

ಇಂದು ಸಾಂಸ್ಕೃತಿಕ ಸೌರಭ
ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನ. 25ರಂದು ಚಿಗುರು ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಹಮ್ಮಿಕೊಂಡಿದೆ. ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟನಲ್ಲಿ ಚಿಗುರು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹಗರಿಬೊಮ್ಮನಹಳ್ಳಿಯ ವಾಸವಿ ಕಲ್ಯಾಣ ಮಂಟಪದಲ್ಲಿ ನ. 25ರ ಸಂಜೆ 6.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಳ್ಳಾರಿಯ ಬಿ.ಆರ್. ಹನಿ ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ನ. 25ರ ಸಂಜೆ 6.30ಕ್ಕೆ ಬಳ್ಳಾರಿ ತಾಲೂಕು ಬ್ಯಾಡರ ಬೆಳಗಲ್ಲು ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬಳ್ಳಾರಿಯ ಎಂ. ನಾಗಭೂಷಣ ಅವರು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಪ್ರಸ್ತುತಪಡಿಸಲಿದ್ದಾರೆ ಎಂದು ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಬಳ್ಳಾರಿ: ಇಂದು ಬತ್ತ ಕ್ಷೇತ್ರೋತ್ಸವ
ಬಳ್ಳಾರಿ: ಕೃಷಿ ಇಲಾಖೆಯಿಂದ ನ. 25ರಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿಯ ಮಂಗಮ್ಮ ಕ್ಯಾಂಪಿನ ಎಚ್‌ಎಲ್‌ಸಿ ಕಾಲುವೆ ಡಿಪಿ ನಂ. 15ರ ಬಳಿಯಿರುವ ತಾಕಿನಲ್ಲಿ ಕೂರಿಗೆ ಬತ್ತ ಕ್ಷೇತ್ರೋತ್ಸವವನ್ನು ಏರ್ಪಡಿಸಿದೆ ಬಳ್ಳಾರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎನ್. ಕೆಂಗೇಗೌಡ ತಿಳಿಸಿದ್ದಾರೆ. ಭೂ-ಚೇತನ ಯೋಜನೆಯಡಿ ಮುಂಡರಗಿಯ ಸಿ. ರಾಮಾಂಜನೇಯಲು ಅವರು ನಾಟಿ ಮಾಡುವ ಬದಲು ಕೂರಿಗೆ ಮೂಲಕ ಬಿತ್ತನೆ ಮಾಡಿ ಬೆಳೆದ ಬತ್ತದ ಬೆಳೆಯ ಕ್ಷೇತ್ರೋತ್ಸವನ್ನು ಹಮ್ಮಿಕೊಳ್ಳಲಾಗಿದೆ. ರೈತ ಬಾಂಧವರು ಕ್ಷೇತ್ರೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.