ಬಳ್ಳಾರಿ

ಕ್ಷೇತ್ರದ ಎಲ್ಲ ಹಳ್ಳಿಗೂ ಶುದ್ಧ ಕುಡಿವ ನೀರು

Published On :

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ನ. 25
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೆ ಮೊದಲ ಆದ್ಯತೆಯನ್ನು ಶುದ್ಧ ಕುಡಿಯುವ ನೀರಿಗೆ ನೀಡಿದ್ದು, ಆದರಿಂದ ಹೂವಿನಹಡಗಲಿ ಕ್ಷೇತ್ರದ ಪ್ರತಿ ಹಳ್ಳಿಗೂ ತುಂಗಭದ್ರಾ ನದಿಯಿಂದ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಭರವಸೆ ನೀಡಿದರು.
ತಾಲೂಕಿನ ನವಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಈಗಾಗಲೇ ಕೆಲ ಗ್ರಾಮಗಳಿಗೆ ಸಂಯುಕ್ತ ಕುಡಿಯುವ ನೀರಿನ ಯೋಜನೆ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ತಾಂತ್ರಿಕ ದೋಷ ಕಂಡುಬಂದ ಯೋಜನೆಗಳ ಕಾಮಗಾರಿಯನ್ನು ಶೀಘ್ರದಲ್ಲೇ ಬಗೆಹರಿಸಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ನವಲಿಯ ಗುರು ಕೊಟ್ಟೂರೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಮುಜರಾಯಿ ಇಲಾಖೆಯಿಂದ ರು. 2 ಲಕ್ಷ ಅನುದಾನ ಘೋಷಣೆ ಮಾಡಿದ ಸಚಿವರು, ಮುಂಬರುವ ದಿನಗಳಲ್ಲಿ ಉಳಿದ ಎಲ್ಲ ದೇವಸ್ಥಾನಗಳಿಗೆ ಆದ್ಯತೆ ಮೇರೆಗೆ ಅನುದಾನ ನೀಡಲಾಗುವುದು. ಸಿಂಗಟಾಲೂರು ಏತನೀರಾವರಿ ಯೋಜನೆ ಹಿನ್ನೀರಿನಲ್ಲಿ ಮುಳುಗಡೆಯಾಗುತ್ತಿರುವ ಅಲ್ಲಿಪುರ ಗ್ರಾಮಕ್ಕೆ ಗುಂಪು ಮನೆಗಳ ವಿತರಣೆ ಮಾಡುವ ಕುರಿತು ವಸತಿ ಸಚಿವರ ಬಳಿ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇನೆ. ಚುನಾವಣೆಯಲ್ಲಿ ಮಾತು ಕೊಟ್ಟಂತೆ ನಡೆದುಕೊಳ್ಳುತ್ತೇನೆ ಎಂದರು.
ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು 371 (ಜೆ) ಕಲಂನಡಿ ಸಾಕಷ್ಟು ಅನುದಾನ ಹರಿದು ಬರಲಿದ್ದು, ಕ್ಷೇತ್ರದ ಎಲ್ಲಾ ಗ್ರಾಮಗಳ ಮೂಲ ಸೌಕರ್ಯಗಳನ್ನು ನೀಡಲು ತಾವು ಬದ್ಧವಿರುವುದಾಗಿ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಗೋಳ್ ಚಿದಾನಂದ, ಎಂ. ಪರಮೇಶ್ವರಪ್ಪ, ಜಿಪಂ ಸದಸ್ಯ ವಸಂತ, ಎಪಿಎಂಸಿ ಅಧ್ಯಕ್ಷ ವಾರದ್ ಗೌಸ್ ಮೋಹಿದ್ದಿನ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಬಸವನಗೌಡ ಪಾಟೀಲ್, ನವಲಿ ಗ್ರಾಪಂ ಅಧ್ಯಕ್ಷ ಹಾಲೇಶ, ಶಾಂತನಗೌಡ, ತಾಪಂ ಅಧ್ಯಕ್ಷೆ ಶಿಲ್ಪಾಸಿಂಗ್ ರಾಠೋಡ್, ಉಪಾಧ್ಯಕ್ಷೆ ಪ್ರೇಮಾ, ತಾಪಂ ಸದಸ್ಯರಾದ ಹೊನ್ನಮ್ಮ, ದುರುಗಮ್ಮ, ಜಿಪಂ ಇಇ ಬಸವನಗೌಡ, ಚಾಂದ್‌ಸಾಬ್ ಸೇರಿದಂತೆ ಇತರರಿದ್ದರು. ಬಸವರಾಜಯ್ಯ ಪ್ರಾರ್ಥಿಸಿದರು. ಶಿವಕುಮಾರ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.