ಭಯೋತ್ಪಾದಕರ ವಿರುದ್ಧ ಕ್ರಮಕ್ಕೆ ಆಗ್ರಹ
ಹೊಸಪೇಟೆ: ಮುಂಬೈ ಬಾಂಬ್ ಸ್ಫೋಟದಲ್ಲಿ ಭಾಗಿಯಾದ ಭಯೋತ್ಪಾದಕರಿಗೆ ಸರ್ಕಾರ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಹೊಸಪೇಟೆ ಸ್ಲಂ ಜನರ ವೇದಿಕೆ, ನಗರ ಹಾಗೂ ಗ್ರಾಮೀಣ ವಿಕಲಚೇತನರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.
ಮುಂಬೈ ಸರಣಿ ಬಾಂಬ್ ಸ್ಫೋಟ ಸಂಭವಿಸಿ ನ. 26ಕ್ಕೆ 5 ವರ್ಷ ತುಂಬಿದ ಹಿನ್ನೆಲೆಯಲ್ಲಿ ಘಟನೆಯಲ್ಲಿ ಮಡಿದ ಜನತೆಗೆ ಹಾಗೂ ಹುತಾತ್ಮ ಯೋಧರಿಗೆ ಮೇಣದ ಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಿದರು. ಎನ್. ವೆಂಕಟೇಶ್ ಮಾತನಾಡಿ, ಮುಂಬೈ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು. ಇದೇ ರೀತಿಯಲ್ಲಿ ವಿವಿಧ ಸ್ಪೋಟಕಗಳ ಪ್ರಕರಣಗಳಲ್ಲಿ ಬಂಧಿಸಿರುವ ಆರೋಪಿಗಳು, ಉಗ್ರರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದರು.
ವಿಕಲಚೇತನರ ಸಂಘದ ಜಿ. ಮುಕ್ಕಣ್ಣ, ಕೆ.ಜಿ. ವೆಂಕಟೇಶ್, ಜಿ. ಅಂಜಿನಿ, ಪಾಂಡು ನಾಯ್ಕ, ರಾಜಾಸಾಬ್, ಮಹಮ್ಮದ್ ರಫೀಕ್, ಅಶೋಕ್, ಅರುಣ್ ಕುಮಾರ್, ಖಾಜಾಬನ್ನಿ, ಶಮೀನಾ ಕೌಸರ್, ವೆಂಕಮ್ಮ, ಶಿವಗಂಗಮ್ಮ, ಹುಲುಗಪ್ಪ, ಪರಶುರಾಮ, ಸ್ಲಂ ಜನರ ವೇದಿಕೆ ಎಚ್. ಶೇಷ, ಡಿ. ವೀರನಗೌಡ, ವಿಜಯಕುಮಾರ್, ಶ್ಯಾಂ, ಓಬಳೇಶ್, ಮಹಾದೇವ್, ವೆಂಕಟೇಶ್, ಬಾಬು ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

