ಬಳ್ಳಾರಿ

ಡಿ. 13ರಂದು ಸಭೆ

Published On :

ಬಳ್ಳಾರಿ: ಜಿಪಂ ನಜೀರ್ ಸಭಾಂಗಣದಲ್ಲಿ ಡಿ. 13ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅಧ್ಯಕ್ಷತೆಯಲ್ಲಿ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಆರ್ಥಿಕ, ಭೌತಿಕ ವಿವರಗಳೊಂದಿಗೆ ಹಾಜರಾಗಬೇಕೆಂದು ಜಿಪಂ ಸಿಇಒ ಮಂಜುನಾಥ ನಾಯಕ್ ತಿಳಿಸಿದ್ದಾರೆ.
ಗುಂಪುಗೂಡುವಿಕೆಗೆ ನಿಷೇಧ
ಬಳ್ಳಾರಿ: ಜಿಂದಾಲ್ ಸಂಸ್ಥೆಯು ಕೈಗಾರಿಕ ವಾಹನಗಳಿಗಾಗಿ ಸಂಡೂರು ತಾಲೂಕಿನ ವಡ್ಡು, ನಾರಿಹಳ್ಳ ಮತ್ತು ಎಸ್. ಬಸಾಪುರ ಮೂಲಕ ತಾಳೂರು ರಸ್ತೆಗೆ ಸೇರಲು ಬೈಪಾಸ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಈ ಕಾಮಗಾರಿಗೆ ಅಡಚಣೆಯಾಗದಂತೆ ಸದರಿ ರಸ್ತೆಯಲ್ಲಿ ಜನರು ಗುಂಪುಗೂಡುವುದನ್ನು ಹಾಗೂ ಧರಣಿ ನಡೆಸುವುದನ್ನು ನಿಷೇಧಿಸಿ ಪ್ರಭಾರಿ ಜಿಲ್ಲಾ ದಂಡಾಧಿಕಾರಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಬಳ್ಳಾರಿಯಿಂದ ಹೊಸಪೇಟೆಗೆ ಹೋಗುವ (ಎಚ್‌ಎಲ್‌ಸಿ) ಮೇಲು ಸೇತುವೆ ಬಿದ್ದು ಹೋಗಿದ್ದು, ಭಾರಿ ಸಂಚಾರ ವ್ಯವಸ್ಥೆ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಎಲ್ಲಾ ವಾಹನಗಳು ಕುರೇಕುಪ್ಪ, ಎಸ್. ಬಸಾಪುರ ಹಾಗೂ ವಡ್ಡು ಗ್ರಾಮದ ಮೂಲಕ ತಾಳೂರು ಗೇಟ್ ಮಾರ್ಗವಾಗಿ ಸಂಚರಿಸುತ್ತಿವೆ. ರಸ್ತೆ ನಿರ್ಮಾಣ ಮಾಡಲು ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಕಾಮಗಾರಿ ಕೈಗೊಳ್ಳಲು ಸಾರ್ವಜನಿಕರು ಅಡ್ಡಿಪಡಿಸುತ್ತಿರುವುದರಿಂದ ಶಾಂತಿಭಂಗ ಉಂಟಾಗುವ ಹಿನ್ನೆಲೆಯಲ್ಲಿ ಸಿಆರ್‌ಪಿಸಿ 1974 ನಿಯಮ 133 ಹಾಗೂ 144ರನ್ವಯ ಈ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದಿದ್ದಾರೆ.
ಅರ್ಜಿ ಆಹ್ವಾನ
ಬಳ್ಳಾರಿ: ಬಳ್ಳಾರಿ ನಗರದಲ್ಲಿ ಹೊಸದಾಗಿ ಮಂಜೂರಾದ ಮೆಟ್ರಿಕ್ ನಂತರದ ಬಾಲಕಿಯರ ನರ್ಸಿಂಗ್ ವಿದ್ಯಾರ್ಥಿ ನಿಲಯದ ಪ್ರವೇಶಕ್ಕಾಗಿ 2013-14ನೇ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಅಥವಾ ಅಂಗಿಕೃತ ಶಿಕ್ಷಣ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರ ನರ್ಸಿಂಗ್ ಮತ್ತು ಬಿಎಸ್ಸಿ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಅಧ್ಯಯನ ಮಾಡುವ ಶೈಕ್ಷಣಿಕ ಸಂಸ್ಥೆಯಿಂದ 5 ಕಿ.ಮೀ. ದೂರದಲ್ಲಿ ವಾಸಿಸುವ ವಿದ್ಯಾರ್ಥಿನಿಯರು ಪ್ರವೇಶ ಪಡೆಯಬಹುದು.  ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕುಟುಂಬದ ವಾರ್ಷಿಕ ಆದಾಯ ರು. 44,500 ಹಾಗೂ ಪ್ರವರ್ಗ- 1, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರಿಗೆ ರು. 2 ಲಕ್ಷ ನಿಗದಿಪಡಿಸಲಾಗಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹಿಂದಿನ ತರಗತಿಯಲ್ಲಿ ಪಾಸಾದ ಬಗ್ಗೆ ದೃಢೀಕೃತ ಅಂಕಪಟ್ಟಿ, ಕಾಲೇಜು ಪ್ರವೇಶ ಪಡೆದ ಬಗ್ಗೆ ಪ್ರಾಚಾರ್ಯರಿಂದ ದೃಢೀಕೃತ ಪ್ರವೇಶ ಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸ್ವ ವಿಳಾಸದಿಂದ ಇರುವ ಬಗ್ಗೆ ಗ್ರಾಪಂ ಕಾರ್ಯದರ್ಶಿಯಿಂದ ಪಡೆದ ಅಂತರ ದೃಢೀಕರಣ ಪ್ರಮಾಣಪತ್ರ ಲಗತ್ತಿಸಿ ನ. 30ರೊಳಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ತಾಪಂ ಕಚೇರಿ ಆವರಣ, ಬಳ್ಳಾರಿ, ಕಚೇರಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಸ್ವಯಂ ಉದ್ಯೋಗ ಹೊಂದಿ: ಪನ್ನರಾಜ್

ಬಳ್ಳಾರಿ: ತರಬೇತಿಯಲ್ಲಿ ಕಲಿತ ಕೌಶಲ್ಯಗಳನ್ನು ಉತ್ತಮವಾಗಿ ಬಳಸಿಕೊಂಡು ಸ್ವಯಂ ಉದ್ಯೋಗ ಹೊಂದುವಂತೆ ಲೆಕ್ಕ ಪರಿಶೋಧಕ ಸಿರಿಗೇರಿ ಪನ್ನರಾಜ್ ತಿಳಿಸಿದರು.
ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಆಯೋಜಿಸಿದ್ದ 21 ದಿನಗಳ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.
ಜೀವನದಲ್ಲಿ ದೊರಕುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ. ನಿರುದ್ಯೋಗಿಗಳಿಗೆ ಕೌಶಲ್ಯದ ಕೊರತೆಯಿಂದ ಉದ್ಯೋಗ ದೊರೆಯುತ್ತಿಲ್ಲ. ಆದ್ದರಿಂದ ಇಂತಹ ತರಬೇತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವಾವಲಂಬಿ ಜೀವನ ನಡೆಸಬಹುದು ಎಂದರು.
ಕೌಶಲ್ಯ ತರಬೇತುದಾರ ಸಿದ್ಧಲಿಂಗಸ್ವಾಮಿ ಮಾತನಾಡಿ, ಫೋಟೋಗ್ರಫಿ ಮತ್ತು ವೀಡಿಯೋಗ್ರಪಿ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಾದ ಗಾದಿಲಿಂಗ, ದುರ್ಗೇಶ ಹಾಗೂ ಇತರರು ತಮ್ಮ ಅನಿಸಿಕೆ ಹಂಚಿಕೊಂಡರು. ವೈದ್ಯ ಡಾ. ಅರವಿಂದ್ ಪಟೇಲ್, ಉಪನ್ಯಾಸಕ ಎಚ್.ಪಿ. ಕಲ್ಲೇಶಪ್ಪ ಹಾಗೂ ಸಂಸ್ಥೆಯ ಸಿಬ್ಬಂದಿ ಮತ್ತು ಇತರರು ಇದ್ದರು. ಸಂತೋಷಕುಮಾರ್ ನಿರೂಪಿಸಿದರು. ಕಲ್ಲೇಶಪ್ಪ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.