ದೇಶದ ಪ್ರಗತಿಗೆ ಉದ್ಯಮ ಪೂರಕ: ಪೇಜಾವರ ಶ್ರೀ
ಹುಬ್ಬಳ್ಳಿ: ಉದ್ಯಮ ಕ್ಷೇತ್ರ ಬೆಳೆದು ನಿಂತಲ್ಲಿ ದೇಶ ಬೆಳೆಯುತ್ತದೆ. ಇವು ಬಂಡಿಯ ಎರಡು ಗಾಲಿಗಳಿದ್ದಂತೆ ಎಂದು ಉಡುಪಿ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಕುಸಗಲ್ ರಸ್ತೆಯಲ್ಲಿ ನೂತನವಾಗಿ ಆರಂಭಗೊಂಡಿರುವ ರಾಮ್ ಹುಂಡೈ ಶೋರೂಮ್ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯಮ ಕ್ಷೇತ್ರ ಬೆಳೆದು ನಿಂತರೆ ದೇಶದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಜತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗುತ್ತದೆ. ಸುಶಿಕ್ಷಿತರು ಸ್ವಂತ ಉದ್ಯೋಗ ಕೈಗೊಳ್ಳಲು ಮುಂದಾಗಬೇಕು ಎಂದರು.
ಉತ್ತರ ಕರ್ನಾಟಕ ಉದ್ಯಮ ಕ್ಷೇತ್ರದಲ್ಲಿ ಇನ್ನೂ ಹಿಂದುಳಿದಿದೆ ಎನ್ನುವ ಮಾತಿದೆ. ಉತ್ತರ ಕರ್ನಾಟಕ ನಿರ್ಲಕ್ಷ್ಯತನಕ್ಕೆ ಒಳಗಾಗಿರುವುದೇ ಇದಕ್ಕೆ ಕಾರಣ. ಈ ಭಾಗದಲ್ಲಿ ಇಂಥ ಉದ್ಯಮಗಳು ಬೆಳೆದು ಬರಬೇಕು. ಅಂದಾಗ ಉತ್ತರ ಕರ್ನಾಟಕ ಬೆಳವಣಿಗೆ ಹೊಂದುತ್ತದೆ ಎಂದ ಶ್ರೀಗಳು ಉದ್ಯಮಿಗಳು ತಾವು ಗಳಿಸಿದ ಆದಾಯದಲ್ಲಿ ಒಂದಂಶವನ್ನು ಸಮಾಜದ ಅಭಿವೃದ್ಧಿಗೆ ದಾನ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಮಿತಿ ರೆಡ್ಡಿ, ಮದನ ದೇಸಾಯಿ, ಶ್ರೀಕಾಂತ ಕೆಮ್ತುರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

