ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಬಳ್ಳಾರಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ, ಬಳ್ಳಾರಿಯ ಜನಪರ ಹೋರಾಟ ಸಮಿತಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಳಗಾವಿ ಸುವರ್ಣ ಸೌಧದ ಎದುರು ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ರೈತರು ಪ್ರತಿಭಟನೆ ನಡೆಸಿದರೂ ಅತ್ತ ಗಮನಹರಿಸದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದರಿಂದ ರೈತ ವಿಠಲ ಅರಭಾವಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಯಿತು. ಶಾದಿಭಾಗ್ಯ ಯೋಜನೆಯನ್ನು ಸಮಾಜದ ಎಲ್ಲ ಸಮುದಾಯದ ಬಡ ಮಹಿಳೆಯರಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಲವು ದಿನಗಳ ಕಾಲ ಪ್ರತಿಭಟನೆ ನಡೆಸಿದರೂ ಸೌಜನ್ಯಕ್ಕಾದರೂ ಭೇಟಿ ಮಾಡದೆ ಇರುವುದು ದ್ವೇಷದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ದೂರಿದರು.
ಚಿಕ್ಕ ಮಕ್ಕಳಲ್ಲಿ ಜಾತಿ ವಿಷಬೀಜ ಬಿತ್ತಲು ಮುಂದಾಗಿರುವ ರಾಜ್ಯ ಸರ್ಕಾರ ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾತ್ರ ಶೈಕ್ಷಣಿಕ ಪ್ರವಾಸ ಎಂಬ ಯೋಜನೆ ಜಾರಿಗೊಳಿಸಲು ಮುಂದಾಗಿರುವುದು ಖಂಡನೀಯ. ಮೌಢ್ಯ ನಿಷೇಧ ಕಾನೂನು ಜಾರಿಗೆ ತರಲು ಸರ್ಕಾರವು ಮುಂದಾಗಿದೆ ಎಂದು ದೂರಿದರು.
ಸರ್ಕಾರ ಎಲ್ಲಾ ಸಮುದಾಯ, ಜಾತಿಗಳನ್ನು ಮೂಲವಾಗಿಟ್ಟುಕೊಂಡು ಯೋಜನೆ ರೂಪಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು. ನಂತರ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು.
ಹೋರಾಟ ಸಮಿತಿಯ ಯಲ್ಲನಗೌಡ ಶಂಕರಬಂಡೆ, ಚಾನಾಳ್ ಶೇಖರ್, ದೇಸಾಯಿ ಷಡಕ್ಷರಪ್ಪ, ಮೀನಳ್ಳಿ ಚಂದ್ರಶೇಖರ್, ಜೆ.ಎಂ. ಬಸವರಾಜಸ್ವಾಮಿ, ಬಿ. ತಿಪ್ಪನಗೌಡ, ಆರ್. ಶಿವನಗೌಡ, ಬಿ. ಚಂದ್ರಶೇಖರ ಆಚಾರ್, ಪಿ. ಬಂಡೇಗೌಡ, ದರೂರು ಶಂತನಗೌಡ, ಕಪ್ಪಗಲ್ ರಸೂಲ್ಸಾಬ್, ಕೆ. ಬಸವನಗೌಡ, ಬಿ. ಹೇಮನಗೌಡ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

