ಬಳ್ಳಾರಿ

ದಸರಾ ದರ್ಬಾರ್‌ಗೆ ತೊಂದರೆ ಆಗದಂತೆ ಕ್ರಮಕ್ಕೆ ಆಗ್ರಹ

Published On :

ಹೂವಿನಹಡಗಲಿ: ಗುಲ್ಬರ್ಗ ಜಿಲ್ಲೆ ಜೇವರ್ಗಿಯಲ್ಲಿ ರಂಭಾಪುರಿ ಪೀಠಾಧಿಪತಿಗಳು ನಡೆಸಲಿರುವ ದಸರಾ ದರ್ಬಾರ್‌ಗೆ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಜಂಗಮ ಸಮಾವೇಶ ಒಕ್ಕೂಟ ತಹಸೀಲ್ದಾರ್‌ಗೆ ಬುಧವಾರ ಮನವಿಪತ್ರ ಸಲ್ಲಿಸಿದರು.
ದಸರಾ ದರ್ಬಾರ್‌ನ್ನು ಕೆಲವರು ವಿರೋಧಿಸಿ ಕಾರ್ಯಕ್ರಮ ನಡೆಯದಂತೆ ರಂಭಾಪುರಿ ಜಗದ್ಗುರುಗಳ ಕಾರ್ಯಕ್ರಮಕ್ಕೆ ಪರ್ಯಾಯವಾಗಿ ಕಾರ್ಯಕ್ರಮ ಹಮ್ಮಿಕೊಂಡು ಕೋಮು ಗಲಭೆ ರೂಪಿಸಿ ಅಡ್ಡಿ ಪಡಿಸುವ ಕುತಂತ್ರ ಹೂಡಿ, ಸಮಾಜದ ಸ್ವಸ್ಥ್ಯ ಹಾಳು ಮಾಡುತ್ತಿದ್ದಾರೆಂದು ಮನವಿಯಲ್ಲಿ ಆರೋಪಿಸಿದ್ದಾರೆ.
ರಂಭಾಪುರಿ ಶ್ರೀಗಳ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ಇಂದು ನಿನ್ನೆಯದಲ್ಲ. ಸಾವಿರಾರು ವರ್ಷಗಳ ಇತಿಹಾಸವಿದೆ. ತನ್ಮೂಲಕ ಜಗದ್ಗುರುಗಳು ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮಗಳಲ್ಲಿ ಧರ್ಮ ಮತ್ತು ಸಂಸ್ಕೃತಿಗಳ ಜೀವಾಳವಿದೆ. ಇದಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಪೀಠ ಪರಂಪರೆಯ ಧರ್ಮ ಮತ್ತು ಸಾಮಾಜಿಕ ಕಾರ್ಯಕ್ರಮಗಳಿಗೆ ಯಾವುದೇ ಕಾರಣಕ್ಕೂ ಅಡ್ಡಿ ಬಾರದೆಂಬ ಆಶಯ ತಮ್ಮದಾಗಿದೆ ಎಂದಿದ್ದಾರೆ. ಮಾನಿಹಳ್ಳಿ ಪುರವರ್ಗ ಮಠದ ಮಳೆಯೋಗೀಶ್ವರ ಶಿವಾಚಾರ್ಯರು, ಮಹಾದೇವತಾತ, ಸಮಾಜ ಗೌರವಾಧ್ಯಕ್ಷ ಎಚ್.ಎಂ. ಬೆಟ್ಟಯ್ಯ, ಅಧ್ಯಕ್ಷ ಎಸ್.ಎಂ. ಬಸವರಾಜ, ಜಂಗಮ ನೌಕರರ ಸಂಘದ ಅಧ್ಯಕ್ಷ ಎಂ.ಪಿ.ಎಂ. ಮಂಜುನಾಥ, ಟಿ.ಎಂ. ಆನಂದಯ್ಯ, ಎ.ಎಂ. ಹಾಲಯ್ಯ ಶಾಸ್ತ್ರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.