ಬಳ್ಳಾರಿ

ಎಂಜಿನಿಯರಿಂಗ್ ಕಾಲೇಜಿಗೆ ರು. 200 ಕೋಟಿ

Published On :

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ ಅ. 5
ರಾಜ್ಯ ಸರ್ಕಾರವು 4 ಕಡೆಗಳಲ್ಲಿ ಮಂಜೂರು ಮಾಡಿದ್ದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಮೂಲಭೂತ ಸೌಕರ್ಯ ಮತ್ತು ಕಟ್ಟಡ ನಿರ್ಮಾಣಕ್ಕಾಗಿ ರು. 200 ಕೋಟಿ ಮಂಜೂರು ಮಾಡಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉಪ ಕುಲಪತಿ ಎಚ್. ಮಹೇಶಪ್ಪ ತಿಳಿಸಿದ್ದಾರೆ.
ತಾಲೂಕಿನ ಹುಲಿಗುಡ್ಡದ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಾಮಗಾರಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರದ ಕಾಲೇಜಿನಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಅವರು ಮಾತನಾಡಿದರು.
ರಾಜ್ಯದ ಹೂವಿನಹಡಗಲಿ, ಕಾರವಾರ, ರಾಯಚೂರು ಮತ್ತು ಗಂಗಾವತಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಕಳೆದ ವರ್ಷ ಸರ್ಕಾರ ನೀಡಿದ್ದು, ಕಟ್ಟಡ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಟಿಯು ರು. 200 ಕೋಟಿಗಳಲ್ಲಿ 4 ಕಡೆಗಳಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲಾಗಿದೆ ಎಂದು ತಿಳಿಸಿದರು.
ಕಾಲೇಜು ನಿರ್ಮಾಣಕ್ಕೆ ಅಗತ್ಯ ನಿವೇಶನಗಳಿವೆ. ಆದರೆ, ಹೂವಿನಹಡಗಲಿ ಹುಲಿಗುಡ್ಡದ ಬಳಿ ನಿರ್ಮಾಣವಾಗುತ್ತಿರುವ ಕಾಲೇಜು ಕಟ್ಟಡಕ್ಕೆ 25 ಎಕರೆ ನಿವೇಶನವಿದೆ. ತಲಾ ಒಂದು ಕಾಲೇಜು ಕಟ್ಟಡ ನಿರ್ಮಾಣಕ್ಕೆ ರು. 50 ಕೋಟಿ ನೀಡಲಾಗಿದೆ. ಮೊದಲ ಹಂತದಲ್ಲಿ ರು. 25 ಕೋಟಿಗಳನ್ನು ನೀಡಲಾಗಿದೆ ಎಂದರು.
ಈ 4 ಕಾಲೇಜುಗಳ ಕಟ್ಟಡ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕಾಮಗಾರಿ ಮುಂಬರುವ ಶೈಕ್ಷಣಿಕ ವರ್ಷದೊಳಗಾಗಿ ಪೂರ್ಣಗೊಳಿಸಿ ಮುಂದಿನ ವರ್ಷ ಹೊಸ ಕಟ್ಟಡದಲ್ಲೇ ತರಗತಿಗಳನ್ನು ನಡೆಸುವ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಲೇಜು ಪ್ರಾಚಾರ್ಯ ಚಿಕ್ಕಣ್ಣ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.