ಸೇವಾ ಮನೋಭಾವ ಹೊಂದಿ
ಕನ್ನಡಪ್ರಭ ವಾರ್ತೆ, ಕೂಡ್ಲಿಗಿ, ಅ. 5
ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಸೇವಾ ಮನೋಭಾವ ಹೊಂದುವುದು ಅಗತ್ಯ ಎಂದು ಹಿರೇಮಠ ವಿದ್ಯಾಪೀಠ ಕಾಲೇಜಿನ ಪ್ರಾಚಾರ್ಯ ಎಚ್. ಸಿದ್ದರಾಮ ಹಿರೇಮಠ ತಿಳಿಸಿದರು.
ಪಟ್ಟಣದ ಶ್ರೀ ಹಿರೇಮಠ ವಿದ್ಯಾಪೀಠ ಕಾಲೇಜು ಎನ್ನೆಸ್ಸೆಸ್ ಘಟಕ ಗುರುವಾರ ತಾಲೂಕಿನ ಅಮರದೇವರಗುಡ್ಡ ಗ್ರಾಮದಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡಿದ್ದ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಎನ್ನುವುದನ್ನು ಮನಗಂಡು ಗ್ರಾಮಾಭಿವೃದ್ಧಿಗೆ ಒತ್ತು ನೀಡಬೇಕು. ಶಿಕ್ಷಣ, ಆರೋಗ್ಯ, ಉದ್ಯೋಗ, ಸೇರಿ ಅನೇಕ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತಿ ಹೊಂದುವುದು ಪ್ರತಿಯೊಬ್ಬರ ಕರ್ತವ್ಯವಾಗಲಿ ಎಂದು ತಿಳಿಸಿದರು.
ಹಿರೇಮಠ ಪೀಠದ ಶ್ರೀ ಪ್ರಶಾಂತ ಸಾಗರ ಶಿವಾಚಾರ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಕೇವಲ ಕಾರ್ಯಕ್ರಮಕ್ಕಾಗಿ ಸೇವೆ ಎಂಬುದಾಗಬಾರದು. ನಿರಂತರ ಸೇವಾ ಮನೋಭಾವನೆ ರೂಢಿಸಿಕೊಳ್ಳಬೇಕು ಎಂದರು.
ದೇಶ ಹಳ್ಳಿಗಳಿಂದ ಕೂಡಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇನ್ನು ಕೂಡ ಏಳಿಗೆಯಾಗದ ಹಳ್ಳಿಗಳಾಗಿ ಉಳಿದಿರುವುದು ಅಭಿವೃದ್ಧಿಗೆ ಹಿಡಿದ ಕನ್ನಡಿ. ಹಳ್ಳಿಗಳ, ಜನಸಾಮಾನ್ಯರ ಉದ್ಧಾರಕ್ಕೆ ನಾಯಕರ ಇಚ್ಛಾಶಕ್ತಿ ಕೊರತೆ ಕಾಡುತ್ತಿದೆ. ಕೇವಲ ನುಂಗಣ್ಣಗಳೇ ತುಂಬಿರುವುದು ವಿಷಾದನೀಯ ಎಂದು ಹೇಳಿದರು. ಬಿಇಒ ಎಂ.ಆರ್. ಮಂಜುನಾಥ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಹಿರೇಮಠ ವಿದ್ಯಾಪೀಠದ ಆಡಳಿತಾಧಿಕಾರಿ ವೀರೇಶ್ ಅಂಗಡಿ, ಎನ್ನೆಸ್ಸೆಸ್ ಅಧಿಕಾರಿ ಸುರೇಶ್ ಮುದ್ದೆಬಿಹಾಳ್, ಮುಖ್ಯಶಿಕ್ಷಕಿ ಯಶೋಧಾ, ಶಿಕ್ಷಕ ನಾಗರಾಜ, ನಾಗೇಶ್ ಶೆಟ್ಟಿ, ಹನುಮಂತಪ್ಪ, ಅಜ್ಜಣ್ಣ, ಬಿ. ನಾಗರಾಜ, ಬಸಣ್ಣ, ಎಚ್. ಚನ್ನಬಸಪ್ಪ, ಎಂ.ಜಿ. ನಾಗರತ್ನಾ, ಉಪನ್ಯಾಸಕರಾದ ಅರವಿಂದ ಕುಲಕರ್ಣಿ, ದೇವಪ್ಪ ಮುಂತಾದವರು ಉಪಸ್ಥಿತರಿದ್ದರು.
ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಎನ್ನುವುದನ್ನು ಮನಗಂಡು ಗ್ರಾಮಾಭಿವೃದ್ಧಿಗೆ ಒತ್ತು ನೀಡಬೇಕು. ಶಿಕ್ಷಣ, ಆರೋಗ್ಯ, ಉದ್ಯೋಗ, ಸೇರಿ ಅನೇಕ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತಿ ಹೊಂದುವುದು ಕರ್ತವ್ಯವಾಗಲಿ.
-ಎಚ್. ಸಿದ್ದರಾಮ ಹಿರೇಮಠ,
ಪ್ರಾಚಾರ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

