ಬಳ್ಳಾರಿ

ಪರಿಷ್ಕರಣೆಯಿಂದ ಶೈಕ್ಷಣಿಕ ಅಭಿವೃದ್ಧಿ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಅ. 6
ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಗುಣಮಟ್ಟದ ಶೈಕ್ಷಣಿಕ ವಾತಾವರಣ ಅತ್ಯಂತ ಮಹತ್ವದಾಗಿದ್ದು, ಪ್ರಸ್ತುತ ಪಠ್ಯಕ್ರಮ ಪರಿಷ್ಕರಣೆಯಿಂದ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಮಂಜಪ್ಪ ಹೊಸಮನಿ ಹೇಳಿದರು.
ಇಲ್ಲಿನ ವಿಜಯನಗರ ಮಹಾವಿದ್ಯಾಲಯದಲ್ಲಿ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮತ್ತು ಷಾ ಭವರ್‌ಲಾಲ್ ಬಾಬುಲಾಲ್ ನಾಹರ್ ಬಿ.ಇಡಿ. ಕಾಲೇಜುಗಳು ಭಾನುವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಬಿ.ಇಡಿ. ಪಠ್ಯಕ್ರಮ ಪರಿಷ್ಕರಣ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಹಳೇಯ ಪಠ್ಯಕ್ರಮ: ಇಂದಿನ ವೈಜ್ಞಾನಿಕ ಯುಗದಲ್ಲಿ ತಾಂತ್ರಿಕ ವಿಜ್ಞಾನ ಬಹಳಷ್ಟು ವೇಗವಾಗಿ ಬೆಳೆಯುತ್ತಿರುವುದರಿಂದ ಪ್ರತಿಯೊಬ್ಬರಲ್ಲೂ ಸ್ಪರ್ಧಾತ್ಮಕ ಮನೋಭಾವನೆ ಹೆಚ್ಚಾಗುತ್ತಿದೆ. ಇಂದಿನ ಪಠ್ಯಕ್ರಮ ಸುಮಾರು ಅನೇಕ ವರ್ಷಗಳಷ್ಟು ಹಳೆಯ ಪದ್ಧತಿಯಲ್ಲಿಯೇ ಪಾಠ್ಯಕ್ರಮ ರೂಪಗೊಂಡಿವೆ. ಉದ್ಯೋಗವಕಾಶ ಸಿಗುವಂತಹ ಪಠ್ಯಕ್ರಮ ರೂಪಿಸಬೇಕಾಗಿದೆ. ಅನೇಕ ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಮೂಲ ಉದ್ದೇಶವನ್ನಾಗಿಟ್ಟುಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಉದ್ಯೋಗ ಆಧಾರಿತ ಕೋರ್ಸ್‌ಗಳು ಹೆಚ್ಚಾಗಿ ಆರಂಭವಾಗಬೇಕಾಗಿದೆ ಎಂದರು.
ಬಳ್ಳಾರಿ ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅಧ್ಯಕ್ಷತೆ ವಹಿಸಿದ್ದರು. ವಿವಿಯ ಅಧ್ಯಯನ ಮಂಡಳಿ ಅಧ್ಯಕ್ಷ ನಾಗಪ್ಪ ಶಹಾಪುರ, ವೀವಿ ಸಂಘದ ಕಾರ್ಯದರ್ಶಿ ಗುರುಸಿದ್ದಸ್ವಾಮಿ, ಕೋಶಾಧಿಕಾರಿ ಸಂಗನಕಲ್ಲು ಹಿಮಂತರಾಜ, ಷಾ ಭವರಲಾಲ್ ಬಾಬುಲಾಲ್ ನಾಹರ್ ಬಿ.ಇಡಿ. ಕಾಲೇಜು ಆಡಳಿತ ಮಂಡಳಿ ಸದಸ್ಯ ಶರಣಸ್ವಾಮಿ, ಮಂಡಳಿ ಸದಸ್ಯ ಎನ್.ಎಸ್. ರೇವಣಸಿದ್ದಪ್ಪ, ಸಹ ಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ, ವಿಜಯನಗರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಾಲಿಸಿದ್ದಯ್ಯ ಸ್ವಾಮಿ, ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಪೊಲೀಸ್‌ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಿ.ಇಡಿ. ಕಾಲೇಜು ಪ್ರಾಚಾರ್ಯ ಪ್ರೊ.ವಿ.ಎಂ. ರಾಜಶೇಖರ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.