ಬಳ್ಳಾರಿ

ನಾಯಕತ್ವ ಗುಣ ಬೆಳೆಸಿಕೊಳ್ಳಿ: ಪ್ರಸಾದ್ ರೆಡ್ಡಿ

Published On :

ಬಳ್ಳಾರಿ: ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡರೆ ಪ್ರತಿಯೊಬ್ಬರೂ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಬಳ್ಳಾರಿಯ ಶ್ರೀ ಉಜ್ಜಯಿನಿ ಜಗದ್ಗುರು ಸಿದ್ಧೇಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ಜೆ. ಪ್ರಸಾದ ರೆಡ್ಡಿ ತಿಳಿಸಿದರು.
ನಗರದ ಹೊರವಲಯದ ಗುಗ್ಗರಹಟ್ಟಿ ಪ್ರದೇಶದಲ್ಲಿ ಶ್ರೀ.ಉ.ಜೆ.ಸಿ. ಕಾಲೇಜಿನ ವತಿಯಿಂದ ಹಮ್ಮಿಕೊಂಡಿರುವ ಎನ್‌ಎಸ್‌ಎಸ್ ಶಿಬಿರ ಉದ್ಘಾಟಿಸಿ ಮಾತನಾಡಿದರು.
ದೇಶದ ಪ್ರಗತಿಗೆ ಪ್ರತಿಯೊಬ್ಬರೂ ಸೇವಾ ಮನೋಭಾವನೆ ಹೊಂದುವುದು ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿ ಪರಿಸರ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಜತೆಗೆ ಈ ಶಿಬಿರದಲ್ಲಿ ಸ್ವಚ್ಛತೆ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಜೀವನದಲ್ಲಿ ಎಲ್ಲವೂ ಸುಲಭವಾಗಿ ಸಿಗುವುದಿಲ್ಲ. ಕಷ್ಟಪಟ್ಟು ಗಳಿಸಬೇಕು. ಪ್ರತಿಯೊಬ್ಬರೂ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದರು.
ಶಿಕ್ಷಕ ವಿ.ಎಸ್. ಹಂಚಿನಾಳ್, ಉಪನ್ಯಾಸಕರಾದ ಪಾರ್ವತಿ ಎಚ್.ಕೊಳ್ಳಿ, ಕೆ.ಎಂ. ಚನ್ನಬಸಯ್ಯ, ಎಂ. ಶ್ರೀಶೈಲ ಮತ್ತಿತರರು ಇದ್ದರು.
ಚಾಂದಿನಿ ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಜೆ. ಮಹೇಶ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.