ಬಳ್ಳಾರಿ

ಎತ್ತಿನ ಮೇಲೆ ಚಿರತೆ ದಾಳಿ

Published On :

ರಾಣಿಬೆನ್ನೂರು: ತಾಲೂಕಿನ ಚಳಗೇರಿ ಗ್ರಾಮದ ತೋಟದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ ಎತ್ತಿನ ಮೇಲೆ ಚಿರತೆಯೊಂದು ದಾಳಿ ಮಾಡಿ ಗಾಯಗೊಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ 12ರ ಸುಮಾರಿಗೆ ನಡೆದಿದೆ.
ಚಳಗೇರಿ ಗ್ರಾಮದ ರೈತ ಮಾಲತೇಶ ಶಿವಲಿಂಗಪ್ಪ ದೊಡ್ಡಬೆಣ್ಣಿ ಎಂಬುವರು ಹುಣಶಿಕಟ್ಟಿ ಮಾರ್ಗವಾಗಿ ರಾಣಿಬೆನ್ನೂರಿಗೆ ತೆರಳುವ ರಸ್ತೆ ಮತ್ತು ಹರಿಹರ-ರಾಣಿಬೆನ್ನೂರು ರೇಲ್ವೆ ಮಾರ್ಗದ ಪಕ್ಕದಲ್ಲಿರುವ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಎತ್ತುಗಳನ್ನು ವಿಶ್ರಾಂತಿಗೆ ಬಿಟ್ಟು ಮಾಲತೇಶ ಮರದ ಕೆಳಗೆ ವಿರಮಿಸಿದ್ದ ಸಮಯದಲ್ಲಿ ಚಿರತೆ ದಾಳಿ ಮಾಡಿದೆ. ಈ ವೇಳೆ ಮಾಲತೇಶ ಧೈರ್ಯದಿಂದ ಮುನ್ನುಗ್ಗಿದ ಕಾರಣ ಬೆದರಿದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡ ಎತ್ತಿಗೆ ಚಳಗೇರಿ ಗ್ರಾಮದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ಚಿರತೆ ದಾಳಿ ಮಾಡಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ತಿಳಿಸಲಾಗಿದ್ದು, ಅದನ್ನು ಸೆರೆಹಿಡಿಯುವಂತೆ ಮನವಿ ಮಾಡಲಾಗಿದೆ ಎಂದು ತಹಸೀಲ್ದಾರ್ ಬಸವರಾಜ ರಿತ್ತಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.