ಮುಂದುವರಿದ ತೆರವು ಕಾರ್ಯಾಚರಣೆ
ಕನ್ನಡಪ್ರಭ ವಾರ್ತೆ, ಹಗರಿಬೊಮ್ಮನಹಳ್ಳಿ, ಅ. 8
ಪಟ್ಟಣದ ಬಸವೇಶ್ವರ ಬಜಾರನಲ್ಲಿನ ಫುಟ್ಪಾತ್ ಮೇಲಿನ ಅಂಗಡಿ ತೆರವುಗೊಳಿಸಿದ ಚಿಂತ್ರಪಳ್ಳಿ ಗ್ರಾಮ ಪಂಚಾಯಿತಿ ಆಡಳಿತ ವರ್ಗದ ಕಾರ್ಯಕ್ಕೆ ಪಟ್ಟಣದ ಜನತೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಹಲವು ವರ್ಷಗಳ ನಂತರವಾದರೂ ಗ್ರಾಮ ಪಂಚಾಯಿತಿ ಆಡಳಿತ ದಿಟ್ಟ ನಿರ್ಧಾರ ಕೈಗೊಂಡು ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ಫುಟ್ಪಾತ್ ಮುಕ್ತಗೊಳಿಸಲು ಮುಂದಾಗಿದೆ ಎಂಬುದು ಪಟ್ಟಣದ ಜನತೆಗೆ ನೆಮ್ಮದಿ ತಂದಿದೆ.
ಮಂಗಳವಾರವೂ ಕಾರ್ಯಾಚರಣೆ ಮುಂದುವರಿದಿದ್ದು, ಚಿಂತ್ರಪಳ್ಳಿ ಗ್ರಾಪಂ ಸಿಬ್ಬಂದಿ ಮುಂಜಾನೆಯಿಂದಲೇ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿ ಎರಡು ಬದಿಯಲ್ಲಿನ ಗೂಡಂಗಡಿ, ಶೆಡ್ಡ, ಸೈಕಲ್ ಬಂಡಿಗಳನ್ನು ತೆರವು ಮಾಡಲಾಯಿತು.
ಪ್ರಭಾವ: ಈ ನಡುವೆ ಕೆಲ ವ್ಯಾಪಾರಸ್ಥರು ಸ್ಥಳೀಯ ಜನಪ್ರತಿನಿಧಿಗಳು, ರಾಜಕೀಯ ಮುಖಂಡರಿಂದ ಗ್ರಾಪಂ ಆಡಳಿತದ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಿದರು. ಇದಕ್ಕೆ ಜಗ್ಗದ ಗ್ರಾಪಂ ಆಡಳಿತ ಕಾರ್ಯಾಚರಣೆ ಮುಂದುವರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

