ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಸಂಡೂರು, ಅ. 9
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)ಯ ಕಾರ್ಯಕರ್ತರನ್ನು ಬಂಧಿಸಿರುವುದುನ್ನು ಖಂಡಿಸಿ ಕರವೇ ಪದಾಧಿಕಾರಿಗಳುಶಿವರಾಮೇಗೌಡ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ಮಾಡಿದರು.
ಸುಳ್ಳು ಕೇಸು ಹಾಕಿ ಬಂಧಿಸಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು, ಕಾರ್ಯಕರ್ತರ ಮೇಲೆ ಹಾಕಿರುವ ಕೇಸುಗಳನ್ನು ಹಿಂದಕ್ಕೆ ತೆಗೆದುಹಾಕಬೇಕು ಎಂದು ಒತ್ತಾಯಿಸಿ ಡಿಎಚ್ಒ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರು.
ಸೆ. 9ರಂದು ತಾಲೂಕಿನ ಲಕ್ಷ್ಮಿಪುರದಲ್ಲಿ ವಾಂತಿ ಭೇದಿ ಪ್ರಕರಣ ನಡೆದಿತ್ತು, ರೋಗಿಗಳನ್ನು ಸಂಡೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲ, ಸೌಲಭ್ಯಗಳಿಲ್ಲ ಎಂದು ಕರವೇ ಕಾರ್ಯಕರ್ತರು ವೈದ್ಯರಿಗೆ ತಿಳಿಸಿದ್ದಾರೆ. ಜನರ ನೆರವಿಗೆ ಬಂದಿರುವ ವೇದಿಕೆಯ ಪಿ. ರಾಜು, ದೇವಣ್ಣ, ರಫಿಕ್ ಎನ್ನುವವರ ಮೇಲೆ ವೈದ್ಯ ವೈ.ಎಸ್. ಹುನುಮಂತಪ್ಪ ಹಾಗೂ ಪಿಎಸ್ಐ ಅವರು ಪ್ರಕರಣ ದಾಖಲಿಸಿ, ಅವರನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.
ಸುಳ್ಳು ಕೇಸು ಹಾಕಿ ಕಾರ್ಯಕರ್ತರನ್ನು ಬಂಧಿಸಿ ಅಧಿಕಾರಿಗಳ ಅಮಾನತು ಮಾಡಬೇಕು, ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರವೇ ರಾಜ್ಯಾಧ್ಯಕ್ಷ ಶಿವಾರಾಮೇಗೌಡ, ಜಿಲ್ಲಾಧ್ಯಕ್ಷ ಶಿವಮೊಗ್ಗ ಸುರೇಶ್ ಸೇರಿದಂತೆ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

