ಡಾ. ರಂಗರಾಜ್ಗೆ ಬೀಳ್ಕೊಡುಗೆ
ಬಳ್ಳಾರಿ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ 3 ವರ್ಷಗಳ ಕಾಲ ಮೌಲ್ಯಮಾಪನ ಕುಲಸಚಿವರಾಗಿ ಕಾರ್ಯನಿರ್ವಹಿಸಿ, ಇದೀಗ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾಗಿ ವರ್ಗವಾಗಿರುವ ಡಾ. ರಂಗರಾಜ ವನದುರ್ಗ ಅವರಿಗೆ ವಿವಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ವಿವಿ ಕುಲಪತಿ ಪ್ರೊ. ಮಂಜಪ್ಪ ಹೊಸಮನೆ ಅವರು ರಂಗರಾಜ ವನದುರ್ಗ ಅವರಿಗೆ ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಿ ನಂತರ ಮಾತನಾಡಿ, ವಿವಿಯ ಮೌಲ್ಯಮಾಪನ ವಿಭಾಗದಲ್ಲಿ ನೂತನ ಪರೀಕ್ಷಾ ಪದ್ಧತಿಗಳನ್ನು ಅಳವಡಿಸಿದ ಕೀರ್ತಿ ರಂಗರಾಜ ವನದುರ್ಗ ಅವರಿಗೆ ಸಲ್ಲುತ್ತದೆ. ಅವರ ಅಧಿಕಾರದಲ್ಲಿ ಪರೀಕ್ಷಾ ವಿಭಾಗವು ಯಶಸ್ವಿಯಾಗಿ ಫಲಿತಾಂಶ ಪ್ರಕಟಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಜೀವನ ನೀಡಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಲ್ಲಿ ಡಾ. ರಂಗರಾಜ ಯಶಸ್ವಿಯಾಗಿದ್ದಾರೆ ಮತ್ತು ಪರೀಕ್ಷಾ ವಿಭಾಗದ ಗೌಪ್ಯತೆ ಕಾಪಾಡುವಲ್ಲಿ, ಪರೀಕ್ಷೆಗಳನ್ನು ನಡೆಸುವಲ್ಲಿ, ಫಲಿತಾಂಶ ಬಿಡುಗಡೆ ಮಾಡುವಲ್ಲಿ ಇವರು ತೋರಿದ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಅನುಕರುಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಕುಲಸಚಿವ ಡಾ. ರಂಗರಾಜ ವನದುರ್ಗ ಮಾತನಾಡಿ, ಮೂರು ವರ್ಷಗಳ ಅವಧಿಯಲ್ಲಿ ತಮಗೆ ಸಹಕಾರ ನೀಡಿದ ಕರ್ನಾಟಕ ಸರ್ಕಾರಕ್ಕೆ, ವಿವಿ ಕುಲಪತಿಗಳಿಗೆ, ಕಾಲೇಜುಗಳ ಪ್ರಾಚಾರ್ಯರಿಗೆ, ಬೋಧಕ, ಬೋಧಕೇತರ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳನ್ನು, ಕವಿ, ಕಲಾವಿದರನ್ನು, ಮಾಧ್ಯಮ ಮಿತ್ರರನ್ನು, ವಿದ್ಯಾರ್ಥಿಗಳನ್ನು ಸ್ಮರಿಸಿದರು. ವಿವಿಯ ನೂತನ ಮೌಲ್ಯಮಾಪನ ಕುಲಸಚಿವ ಪ್ರೊ.ಟಿ. ಸುರೇಶ್, ವಿವಿಧ ವಿಭಾಗಗಳ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿವಿಧ ಕಾಲೇಜುಗಳ ಸಿಬ್ಬಂದಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

