ಬಳ್ಳಾರಿ

ಕಾಲುಬಾಯಿ ಬರದಂತೆ ಜಾಗ್ರತೆ ವಹಿಸಿ

Published On :

ಬಳ್ಳಾರಿ: ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಸೂಕ್ತ ಲಸಿಕೆ ಹಾಕಿ, ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾಪ ನಡೆದ ಜಿಪಂ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಪಂಪಾಪತಿ, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕಲು 14 ತಂಡ ರಚಿಸಿ ತಾಲೂಕುವಾರು ನಿಯೋಜಿಸಲಾಗಿದೆ. ಶೇ. 95ರಷ್ಟು ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದೆ. ಯಾವುದೇ ಗಂಭೀರ ಸ್ವರೂಪದ ಪ್ರಕರಣಗಳಿಲ್ಲ. ಜಾನುವಾರುಗಳ ಜಾತ್ರೆ ನಡೆಸದಂತೆ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಪ್ರತಿದಿನ 4 ಗಂಟೆಯೊಳಗೆ ರಾಜ್ಯ ಮಟ್ಟದ ಮಾಹಿತಿ ಕೇಂದ್ರಕ್ಕೆ ಲಸಿಕೆ ಮತ್ತಿತರ ಮಾಹಿತಿ ಕಳುಹಿಸಲಾಗುತ್ತಿದೆ. ಪಶು ಸಂಗೋಪನಾ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಪಂ ಸಿಇಒ ಮಂಜುನಾಥ ನಾಯಕ್ ಮಾತನಾಡಿ, 8 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಕನಕ ಬಿಟಿ ಹತ್ತಿ ಬಿತ್ತೆನೆಯಾಗಿದ್ದು, ಇದರಿಂದ ರೈತರಿಗೆ ಸಾಕಷ್ಟು ಹಾನಿಯಾಗಿದೆ. ಈ ಬಗ್ಗೆ ಅಧ್ಯಯನ ಮಾಡಲು ರಚಿಸಿರುವ ಸಮಿತಿ ಶೀಘ್ರ ವರದಿ ನೀಡುವಂತೆ ತಿಳಿಸಿದರು.
ಮುಂಜಾಗ್ರತೆ ವಹಿಸಿ: ಡೆಂಘೀ, ಚಿಕೂನ್ ಗುನ್ಯಾ ಮತ್ತಿತರ ಸಾಂಕ್ರಮಿಕ ರೋಗಗಳು ಉಲ್ಬಣವಾಗದಂತೆ ಮುಂಜಾಗ್ರತೆ ವಹಿಸಬೇಕು. ಲಾರ್ವಾ ಸಮೀಕ್ಷೆ ನಡೆಸಿ, ಲಾರ್ವಾ ತಾಣಗಳನ್ನು ನಾಶಪಡಿಸಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೂ ಜಾಗೃತಿ ಮೂಡಿಸಬೇಕು. ವೈದ್ಯಾಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು ಎಂದು ಉಪಾಧ್ಯಕ್ಷೆ ಮಮತಾ ಸುರೇಶ್ ಸೂಚಿಸಿದರು.
ಮಕ್ಕಳಿಗೆ ಲಸಿಕೆ: ಉದ್ಯೋಗ ಖಾತ್ರಿ ಯೋಜನೆಯಡಿ 17.55 ಲಕ್ಷ ಮಾನವ ದಿನಗಳನ್ನು ಉತ್ಪಾದಿಸುವ ಗುರಿ ಇತ್ತು, ಆದರೆ 3.76 ಲಕ್ಷ ಮಾನವ ದಿನಗಳನ್ನು ಉತ್ಪಾದಿಸಲಾಗಿದೆ. ರೈತರಿಗೆ 27,173 ಕ್ವಿಂಟಲ್ ಪ್ರಮಾಣಿತ ಬೀಜ, 81,210 ಟನ್ ರಸಗೊಬ್ಬರ ವಿತರಿಸಲಾಗಿದೆ. 24,0274 ಹೆಕ್ಟೇರ್ ವಿಸ್ತೀರ್ಣದಲ್ಲಿ ಆಹಾರ ಧಾನ್ಯ ಬಿತ್ತನೆ ಮಾಡಲಾಗಿದೆ. ಅಧಿಕ ಇಳುವರಿ ಕಾರ್ಯಕ್ರಮದಡಿ 2,27,583 ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ ಮಾಡಲಾಗಿದೆ. 1,22,710 ತೋಟಗಾರಿಕೆ ಸಸಿಗಳನ್ನು ವಿತರಿಸಲಾಗಿದೆ. 22,598 ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮಾಡಲಾಗಿದೆ. 17,732 ಮಕ್ಕಳಿಗೆ ಡಿಪಿಟಿ ಲಸಿಕೆ, 28,016 ಮಕ್ಕಳಿಗೆ ಪೋಲಿಯೊ, 29,011 ಬಿಸಿಜಿ, 28,466 ಮಕ್ಕಳಿಗೆ ದಢಾರ ಲಸಿಕೆ ಹಾಕಲಾಗಿದೆ ಎಂದು ಸಿಇಒ ಮಂಜುನಾಥ ನಾಯಕ್ ತಿಳಿಸಿದರು. ಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಜಿಪಂ ಉಪಕಾರ್ಯದರ್ಶಿ ನಂದೀಶ್,  ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.