ಲಾರಿ-ಬಸ್ಗೆ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ
ಕೂಡ್ಲಿಗಿ: ತಾಲೂಕಿನ ಬಣವಿಕಲ್ಲು ಬಳಿ ಲಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸಾವನ್ನಪ್ಪಿದ್ದು, 14 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಶನಿವಾರ ನಸುಕಿನ ಜಾವ ನಡೆದಿದೆ.
ಬಾಗಲಕೋಟೆಯ ಗದ್ದಿನಕೆರೆ ಹನುಮಂತಗೌಡ ಪಾಟೀಲ್ (52) ಎಂಬ ವ್ಯಕ್ತಿಯೇ ಸಾವನ್ನಪ್ಪಿರುವ ದುರ್ದೈವಿ. ಈತನಿಗೆ ಅಪಘಾತದಲ್ಲಿ ತೀವ್ರ ಗಾಯಗಳಾಗಿದ್ದರಿಂದ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ಹೊಸಹಳ್ಳಿ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಂಗೇರಿಯ ರಾಮಚಂದ್ರ ಸಿಂಗ್ ಎಂಬುವರು ರಾಜ್ಯಗುಪ್ತದಳದ ಸಿಪಿಐ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇವರ ಪತ್ನಿ ಸುನೀತಾಗೂ ಗಾಯಗಳಾಗಿವೆ. ಬಾಗಲಕೋಟೆಯ ಸುಷ್ಮಾ, ದುರ್ಗಾದಾಸ್, ಜೈನಾಪುರಬಸಪ್ಪ, ವಿದ್ಯಾಗಿರಿ ಭೂಮಿಕಾ, ನಾಗರಾಜ, ಇಂದಿರಾ ಬಾಯಿ, ವಿಶಾಲಾಕ್ಷಿ, ಗುಳೇದ ಗುಡ್ಡ ಗಣೇಶ, ಬಾಗಲಕೋಟೆ ರಾಂಪುರ ಗಿರೀಶ್, ನವನಗರ ಅಂಜಲಿ, ಬಸವರಾಜ, ಬಸ್ ಚಾಲಕನ ಪುತ್ರ ಮಹಂತೇಶ್ ಗಾಯಗೊಂಡವರಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯವರೇ ಹೆಚ್ಚಿನ ಗಾಯಾಳುಗಳಾಗಿದ್ದು, ಖಾಸಗಿ ಬಸ್ ಬೆಂಗಳೂರು ಕಡೆಯಿಂದ ಬಾಗಲಕೋಟೆ ಕಡೆಗೆ ಹೋಗುತ್ತಿದ್ದಾಗ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿದೆ. ಗಾಯಗೊಂಡವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ 3 ಗಂಟೆ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

