ಹೊಸಪೇಟೆ: ಶ್ರದ್ಧಾ ಭಕ್ತಿಯ ದಸರಾ ಆಚರಣೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಅ. 14
ಹೊಸಪೇಟೆ ನಗರ ಸೇರಿದಂತೆ ತಾಲೂಕಿನಲ್ಲಿ ದಸರಾ ಹಬ್ಬವನ್ನು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಮತ್ತು ಅತ್ಯಂತ ವಿಶಿಷ್ಟವಾಗಿ, ವಿಜೃಂಭಣೆಯಿಂದ ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಆಚರಿಸಿದರು.
ವಿಜಯನಗರ ಸಾಮ್ರಾಜ್ಯದಲ್ಲಿ ದಸರಾ ಹಬ್ಬದಲ್ಲಿ ಧಾರ್ಮಿಕ ಆಚರಣೆ, ಸಾಂಸ್ಕೃತಿಕ ಆಚರಣೆಗಳು ದೊಡ್ಡ ರೀತಿಯಲ್ಲಿ ನಡೆಯುತ್ತಿದ್ದು, ಶಕ್ತಿದೇವತೆಗಳ ಆರಾಧನೆ ನಡೆಯುತ್ತಿದ್ದವು. ವಿಜಯನಗರದ ಪತನದ ನಂತರ ಅದು ಮೈಸೂರಿಗೆ ಸ್ಥಳಾಂತರಗೊಂಡಿತು. ಇದು ಇಲ್ಲಿನ ದಸರಾ ಹಬ್ಬದ ಇತಿಹಾಸ. ಆದರೆ ಈ ಭಾಗದ ಜನರು ಮತ್ತು ಜನಪದರು ದಸರಾ ಹಬ್ಬವನ್ನು ಈಗಲೂ ಹೊಸಪೇಟೆ, ಕಮಲಾಪುರ, ಮಲಪನಗುಡಿ, ಅನಂತಶಯನಗುಡಿ, ನಾಗೇನಹಳ್ಳಿ, ಹೊಸೂರು, ಮರಿಯಮ್ಮನಹಳ್ಳಿ ಸೇರಿದಂತೆ ಇತರೆ ಗ್ರಾಮಾಂತರ ಪ್ರದೇಶಗಳಲ್ಲಿ ದಸರಾ ಹಬ್ಬವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸುತ್ತಾ ಬಂದಿದ್ದಾರೆ.
ಹೊಸಪೇಟೆಯಲ್ಲಿ ಏಳುಕೇರಿ ನಾಯಕರಲ್ಲಿ ದಸರಾ ಹಬ್ಬವು ದೊಡ್ಡ ರೀತಿಯಲ್ಲಿ ಆಚರಣೆಗೊಳ್ಳುತ್ತಿದೆ. ನಗರದ ಏಳು ಕೇರಿಯ ದೇವತೆಗಳು ಹಾಗೂ ಕಮಲಾಪುರದ ಏಳು ಕೇರಿಯ ದೇವತೆಗಳು ಸೇರಿದಂತೆ ನಗರದ ವಿವಿಧ ದೇವತೆಗಳು ಹಾಗೂ ಸುತ್ತಮುತ್ತಲಿನ ಶಕ್ತಿ ದೇವತೆಯ ಆರಾಧನೆಯು 9 ದಿನಗಳ ಕಾಲ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಮತ್ತು ವಿಶಿಷ್ಟವಾದ ರೀತಿಯಲ್ಲಿ ಶಕ್ತಿ ದೇವತೆಗಳ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತದೆ. ಸೋಮವಾರ ನಡೆದ ವಿಜಯ ದಶಮಿಯಂದು ಎಲ್ಲಾ ಜನರು ಒಬ್ಬರಿಗೊಬ್ಬರು ಬನ್ನಿ ಕೊಟ್ಟು ಶುಭಾಷಯ ವಿನಿಮಯ ಮಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

