ಬಳ್ಳಾರಿ

ಇಸ್ಪೀಟ್ ಜೂಜಾಟ: 12 ಸಾವಿರ ವಶ

Published On :

ಬಳ್ಳಾರಿ: ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ, ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ರು. 12,400 ಗಳನ್ನು ವಶಪಡಿಸಿಕೊಂಡಿರುವ ಘಟನೆ ಹಲಕುಂದಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಹಲಕುಂದಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಬಳ್ಳಾರಿ ಗ್ರಾಮೀಣ ಠಾಣೆಯ ಪಿಎಸ್‌ಐ ಕೆ. ಹೊಸಕೇರಪ್ಪ ಹಾಗೂ ಸಿಬ್ಬಂದಿ ದಾಳಿ ಮಾಡಿ, ಇಸ್ಪೀಟ್ ಜೂಜಾಟ ಆಡುತ್ತಿದ್ದ ಶಿವರಾಂ, ದಾದಸಾಬ್ ಮತ್ತು ಎಸ್. ವಲಿ ಅವರನ್ನು ಬಂಧಿಸಿ, ಅವರಿಂದ ರು. 12,400 ಗಳನ್ನು ವಶಪಡಿಸಿ ಕೊಂಡಿದ್ದಾರೆ. ಈ ಕುರಿತಾಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.