ನಾಯಕತ್ವ ಗುಣ ಬೆಳೆಸಿಕೊಳ್ಳಿ: ಹಿರೇಮಠ
ಕನ್ನಡಪ್ರಭ ವಾರ್ತೆ, ಕೂಡ್ಲಿಗಿ, ಅ. 15
ನಾಯಕತ್ವ ಗುಣದೊಂದಿಗೆ ಸಮಾಜದ ಅಭಿವೃದ್ಧಿಯಲ್ಲಿ ಯುವಕರು ಕ್ರಿಯಾಶೀಲವಾಗಿ ಪಾಲ್ಗೊಳ್ಳಬೇಕಿದೆ ಎಂದು ಕೂಡ್ಲಿಗಿ ಹಿರೇಮಠ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸಿದ್ಧರಾಮ ಹಿರೇಮಠ ತಿಳಿಸಿದರು.
ಅವರು ತಾಲೂಕಿನ ಅಮರದೇವರಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೂಡ್ಲಿಗಿಯ ಹಿರೇಮಠ ಕಾಲೇಜು ಹಮ್ಮಿಕೊಂಡಿದ್ದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣ, ಆರೋಗ್ಯ, ಸ್ವಚ್ಛತೆ ಅರಿವಿನ ಬಗ್ಗೆ ಯುವ ಸಮೂಹ ಸಮಾಜದಲ್ಲಿ ಜಾಗೃತಿ ಮೂಡಿಸುವತ್ತ ಎಲ್ಲರೂ ಆಲೋಚಿಸಬೇಕು. ಅಲ್ಲದೆ, ಶಾಂತಿ, ಸುವ್ಯವಸ್ಥೆ ಕಾಪಾಡುವ ಮೂಲಕ ಸಹೋದರತೆಯಿಂದ ಜೀವಿಸುವುದು ಪ್ರತಿಯೊಬ್ಬ ನಾಗರಿಕರ ಲಕ್ಷಣ ಎಂದು ಹೇಳಿದರು.
ಸ್ವಚ್ಛತೆಗೆ ಆದ್ಯತೆ ನೀಡಿ: ತಹಸೀಲ್ದಾರ್ ಜವರೇಗೌಡ ಮಾತನಾಡಿ, ಸೇವಾ ಮನೋಭಾವನೆ ಪ್ರತಿಯೊಬ್ಬ ನಾಗರಿಕನಿಗೂ ಇರಬೇಕಾಗಿದ್ದು, ಆ ಮೂಲಕ ನಾಡಿನ ಅಭಿವೃದ್ಧಿಗೆ ಪೂರಕವಾಗುತ್ತದೆ. ವಿದ್ಯಾರ್ಥಿ ಜೀವನವನ್ನು ದುಶ್ಚಟಕ್ಕೆ ಬಲಿಕೊಟ್ಟು ಹಾಳು ಮಾಡಿಕೊಳ್ಳದೆ ಸಮಾಜದ ಶ್ರೇಯೋಭಿವೃದ್ಧಿಗೆ ಮೀಸಲಿಡಬೇಕು ಎಂದರು.
ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುವುದರಿಂದ ಗ್ರಾಮದ ಎಲ್ಲ ಜನತೆಯ ಆರೋಗ್ಯ ಉತ್ತಮವಾಗಿರುತ್ತದೆ. ಪ್ರತಿಯೊಬ್ಬರೂ ವೈಯಕ್ತಿಕ ಶೌಚಾಲಯಗಳನ್ನು ಹೊಂದುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಅಲ್ಲದೆ, ಸರ್ಕಾರದಿಂದ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಅಂತಹ ಯೋಜನೆಗಳ ಸದ್ಬಳಕೆಯಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಮನವಿ ಮಾಡಿದರು.
ಎನ್‌ಎಸ್‌ಎಸ್ ಯೋಜನಾಧಿಕಾರಿ ಸುರೇಶ್ ಮುದ್ದೆಬಿಹಾಳ್, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಕೆ. ಶಿವಪ್ಪನಾಯಕ, ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸದಸ್ಯ ಎಂ. ನಾಗರಾಜ, ಉಪನ್ಯಾಸಕರಾದ ಅರವಿಂದ ಎಸ್. ಕುಲಕರ್ಣಿ, ಡಿ. ದೇವಪ್ಪ, ಬೀನಾಜಾನ್, ಶಿಕ್ಷಕ ಕೆ.ಎಸ್. ವೀರೇಶ್, ಬೋಧಕೇತರ ಸಿಬ್ಬಂದಿ ಕೆ.ಎಚ್.ಎಂ. ವೀರೇಶ್, ಮುಖ್ಯಶಿಕ್ಷಕ ಪಿ.ಎಂ. ತಿಪ್ಪಯ್ಯಸ್ವಾಮಿ, ಸೋಮಶೇಖರ ಆರಾಧ್ಯ, ಬಿ. ನಾಗರಾಜ, ಹುಡೇಂ ಕೃಷ್ಣಮೂರ್ತಿ, ಭೀಮಸಮುದ್ರ ರಂಗನಾಥ ಸೇರಿ ಅನೇಕರು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

