ಬಳ್ಳಾರಿ

ವಾಲ್ಮೀಕಿ ಜಯಂತಿ ಯಶಸ್ವಿಗೆ ವಿ.ಎನ್.ಗಿರಿಮಲ್ಲಪ್ಪ ಮನವಿ

Published On :

ಬಳ್ಳಾರಿ: ಜಿಲ್ಲಾಡಳಿತ, ರಾಜ್ಯ ಸರ್ಕಾರದ ವತಿಯಿಂದ ಅ. 18ರಂದು ಆಚರಿಸಲಾಗುತ್ತಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ವಾಲ್ಮೀಕಿ ನಾಯಕ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸುವಂತೆ ಜಿಲ್ಲಾ ವಾಲ್ಮೀಕಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಎನ್. ಗಿರಿಮಲ್ಲಪ್ಪ ಮನವಿ ಮಾಡಿದ್ದಾರೆ.
ವಾಲ್ಮೀಕಿ ನಾಯಕರ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದ ವತಿಯಿಂದ ಹಾಗೂ ಜಿಲ್ಲಾಡಳಿತ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಂಘ ಸಂಪೂರ್ಣ ಸಹಕಾರ ನೀಡುತ್ತಿದೆ. ಸಂಘದ ಸರ್ವ ಸದಸ್ಯರು, ಸಮಾಜ ಬಾಂಧವರೆಲ್ಲರೂ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಶೋಭೆ ತರುವಂತೆ ಕೋರಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಎಚ್. ರಾಮಯ್ಯ, ಬಿ. ಕುಮಾರಸ್ವಾಮಿ, ಟಿ. ಮಲ್ಲಿಕಾರ್ಜುನ, ಬಿ. ರುದ್ರಪ್ಪ, ಎನ್.ಕೆ. ಸದಾಶಿವಪ್ಪ, ಬಿ. ಜಯರಾಂ, ಅನಿಲ್‌ಕುಮಾರ್, ಕೆ. ವೆಂಕಟಸ್ವಾಮಿ, ಬಿ. ಗೌರಯ್ಯ, ಬಿ. ನಾರಾಯಣಸ್ವಾಮಿ, ಬಿ. ಭೀಮಣ್ಣ, ಬಿ. ಸಿದ್ದಪ್ಪ, ಬಿ. ಗೋಪಾಲ್, ಗಾದಿಲಿಂಗಪ್ಪ, ರಾಮಣ್ಣ, ಸುಂಕಪ್ಪ, ವಿಠೋಬ, ಬಿ. ರಾಮಯ್ಯ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.