ಸಾಚಾರ್ ವರದಿ ಜಾರಿಯಾಗಲಿ
ಬಳ್ಳಾರಿ: ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಿರುವ ಸಾಚಾರ್ ವರದಿಯನ್ನು ಅನುಷ್ಠಾನಕ್ಕೆ ತರಬೇಕು. ಇಲ್ಲವಾದರೆ ಚುನಾವಣೆಯಲ್ಲಿ ಯುಪಿಎ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಕರ್ನಾಟಕ ಮನ್ಸೂರಿ ಪಿಂಜಾರಿ ಸಂಘದ ಅಧ್ಯಕ್ಷ ಕಪ್ಪಗಲ್ ರಸೂಲ್ ಸಾಬ್ ಎಚ್ಚರಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾಚಾರ್ ವರದಿ ಸಿದ್ಧಗೊಂಡು ಈಗಾಗಲೇ 8 ವರ್ಷಗಳೇ ಕಳೆದಿದ್ದು, ಅನುಷ್ಠಾನಕ್ಕೆ ತರಬೇಕಿದ್ದ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಿದೆ. ಇದರ ವಿಳಂಬ ಧೋರಣೆ ಗಮನಿಸಿದರೆ, ಬಿಜೆಪಿಗಿಂತಲೂ ಕಾಂಗ್ರೆಸ್ ಪಕ್ಷವೇ ಕೋಮುವಾದಿ ಆಲೋಚನೆ ಹೊಂದಿದೆ ಎನಿಸುತ್ತದೆ. ಒಂದು ವೇಳೆ ಲೋಕಸಭಾ ಚುನಾವಣೆಯೊಳಗಾಗಿ ವರದಿಯನ್ನು ಅನುಷ್ಠಾನಕ್ಕೆ ತರದೇ ಇದ್ದಲ್ಲಿ ದೇಶಾದ್ಯಂತ ಮುಸ್ಲಿಂ ಸಂಘಟಿತರಾಗಿ ಹಳ್ಳಿ, ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ಬೇವಿನಹಳ್ಳಿ: ಯೋಗ ತರಬೇತಿ ಶಿಬಿರಕ್ಕೆ ಚಾಲನೆ
ಬಳ್ಳಾರಿ: ಪತಂಜಲಿ ಯೋಗ ಸಮಿತಿ ಜಿಲ್ಲಾ ಘಟಕದಿಂದ ನಮ್ಮ ನಡಿಗೆ ಯೋಗದ ಕಡೆಗೆ ಅಭಿಯಾನದ ಅಂಗವಾಗಿ ತಾಲೂಕಿನ ಬೇವಿನಹಳ್ಳಿ ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಐದು ದಿನಗಳ ಯೋಗ ತರಬೇತಿಗೆ ಚಾಲನೆ ನೀಡಲಾಯಿತು. ಯುವ ಭಾರತ ರಾಜ್ಯ ಪ್ರಭಾರಿ ಎಂ. ಭಾಸ್ಕರ್ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಭಾರತ್ ಸ್ವಾಭಿಮಾನ ಟ್ರಸ್ಟ್ನ ಅಧ್ಯಕ್ಷ ಕಣೇಕಲ್ ಎರ್ರಿಸ್ವಾಮಿ ಮಾತನಾಡಿ, ಆರೋಗ್ಯವಂತ ಜೀವನ ನಡೆಸಲು ಯೋಗ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಜಿಲ್ಲಾ ಪತಂಜಲಿ ಯೋಗ ಸಮಿತಿ ಉಪಾಧ್ಯಕ್ಷ ಪಿ.ಎಂ. ನಟರಾಜ್ ಯೋಗ ಶಿಬಿರ ನಡೆಸಿಕೊಟ್ಟರು. ತಿಪ್ಪೇಸ್ವಾಮಿ, ದೊಡ್ಡಗಟ್ಟಿ ಶಿವಪ್ಪ, ಭಾರತ್ ಸ್ವಾಭಿಮಾನ್ ಟ್ರಸ್ಟ್ ಸಂಘಟನಾ ಕಾರ್ಯದರ್ಶಿ ದೊಡ್ಡಬಸಯ್ಯ, ಬ್ಯಾಲಚಿಂತ ಮಹಾಬಲೇಶ್ವರಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

