ಹೊಸಪೇಟೆ: ನಾಳೆ ವಾಲ್ಮೀಕಿ ಜಯಂತಿ
ಹೊಸಪೇಟೆ: ಮಹರ್ಷಿ ವಾಲ್ಮೀಕಿ ಜಯಂತಿ ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅ. 18 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಜಯಂತಿ ಅಂಗವಾಗಿ ಹಂಪಿಯಿಂದ ಬರುವ ಜ್ಯೋತಿಯನ್ನು ಬೆಳಗ್ಗೆ 9 ಗಂಟೆಗೆ ವಾಲ್ಮೀಕಿ ಆಶ್ರಮದಲ್ಲಿ ಶಾಸಕ ಬಿ.ಎಸ್. ಆನಂದ್ ಸಿಂಗ್ ಸ್ವಾಗತಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ವೆಂಕಟೇಶ್ವರ ಕಲ್ಯಾಣ ಮಂಟಪದ ವರೆಗೆ ಮೆರವಣಿಗೆ ಸಾಗಿ, ಅಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸುವವು. ಸಮಾರಂಭವನ್ನು ಶಾಸಕ ಬಿ.ಎಸ್. ಆನಂದ್ ಸಿಂಗ್ ಉದ್ಘಾಟಿಸುವರು. ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಶಿವರಾಮ ಗುಜ್ಜಲ್ ಅಧ್ಯಕ್ಷತೆ ವಹಿಸುವರು.
ಬಳ್ಳಾರಿ ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ಲೋಕಸಭಾ ಸದಸ್ಯೆ ಜೆ. ಶಾಂತಾ, ಕಂಪ್ಲಿ ಕ್ಷೇತ್ರದ ಶಾಸಕ ಟಿ.ಎಚ್. ಸುರೇಶ್ಬಾಬು, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಸ್. ಭೀಮಾನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಮೃತ್ಯುಂಜಯ ಜಿನಗಾ, ಅಮರನಾಥ ಪಾಟೇಲ್, ಶಶಿಲ್ ಜಿ. ನಮೋಶಿ, ತಾಪಂ ಅಧ್ಯಕ್ಷೆ ತಾರೀಹಳ್ಳಿ ಹಾಲಮ್ಮ, ಜಿಪಂ ಸದಸ್ಯೆ ಅನಿತಾ ಆನಂದ್, ಎಪಿಎಂಸಿ ಅಧ್ಯಕ್ಷ ಪುರುಶೋತ್ತಮ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಅಮಾಜಿ ಹೇಮಣ್ಣ, ಸಹಾಯಕ ಆಯುಕ್ತ ಪಿ. ಸುನೀಲ್ ಕುಮಾರ್, ಡಿವೈಎಸ್ಪಿ ಡಿ.ಡಿ. ಮಾಳಗಿ, ಕೆಪಿಸಿಸಿ ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ವಾಲ್ಮೀಕಿ ಸಮಾಜದ ಕಾರ್ಯದರ್ಶಿ ಗುಜ್ಜಲ ರಾಘವೇಂದ್ರ, ತಾಲೂಕು ವಾಲ್ಮೀಕಿ ಸಮಾಜದ ಉಪಾಧ್ಯಕ್ಷ ನಾಣಿಕೇರಿ ತಿಮ್ಮಯ್ಯ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಬಿ.ಎಸ್. ಜಂಬಯ್ಯ ನಾಯಕ ಭಾಗವಹಿಸುವರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ. ಪನ್ನಂಗಧರ ಮುಖ್ಯಭಾಷಣಕಾರರಾಗಿ ಭಾಗವಹಿಸುವರು. ರೈತ ಸಂಘದ ಅಧ್ಯಕ್ಷ ತಾರಿಹಳ್ಳಿ ಹುಲುಗಜ್ಜಪ್ಪ, ಸ್ಥಳೀಯ ಮುಖಂಡರಾದ ಕೆ. ಮಲ್ಲಪ್ಪ, ದಂಗಡಿ ವೇಣುಗೋಪಾಲ, ಗುಡಿಗುಂಟೆ ಮಲ್ಲಿಕಾರ್ಜುನ, ಗುಜ್ಜಲ್ ನಿಂಗಪ್ಪ, ಗಿಂಜಿ ಮಂಜುನಾಥ, ಕಣ್ಣಿ ಉಮಾದೇವಿ ಶ್ರೀಕಂಠ, ಮಟ್ಟೆ ಮಹಾದೇವಿ, ಇದ್ಲಿ ಚೆನ್ನಮ್ಮ, ಪದ್ಮಾವತಿ ಭಾಗವಹಿಸುವರು ಎಂದು ತಹಸೀಲ್ದಾರ್ ರಮೇಶ್ ಕೋನರೆಡ್ಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ತಳವಾರ್, ನಗರಸಭೆ ಪೌರಾಯುಕ್ತ ಮಹಮ್ಮದ್ ಮುನೀರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರಕಾಶ್ ಹುಣಸಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

