ಬಳ್ಳಾರಿ

ಸುದ್ದಿ ಸಂಕ್ಷೇಪ

Published On :

ಇಂದು ವಾಲ್ಮೀಕಿ ಜಯಂತಿ
ಬಳ್ಳಾರಿ: ಜಿಲ್ಲಾ ಆಡಳಿತ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅ. 18ರಂದು ಹಮ್ಮಿಕೊಂಡಿದೆ. ಬೆಳಗ್ಗೆ 9ಕ್ಕೆ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. 9.30ಕ್ಕೆ ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 12.15ಕ್ಕೆ ವೇದಿಕೆ ಕಾರ್ಯಕ್ರಮ ಮಾಜಿ ಪುರಸಭೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲೆಗಿಂದು ಸಚಿವರು
ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅ. 18ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ನಗರದಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಹಡಗಲಿಗೆ ನಿರ್ಗಮಿಸಿ, ಸಂಜೆ ವ್ಯಾಸಮಲ್ಲಾಪುರ ತಾಂಡಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾತ್ರಿ ಹರಪ್ಪನಹಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸಹಾಯಧನ
ಬಳ್ಳಾರಿ:  ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಹಿಂದುಳಿದ ಅಲ್ಪಸಂಖ್ಯಾತರ ಮುಸ್ಲಿಂ ಹೆಣ್ಣು ಮಕ್ಕಳಿಗೆ, ವಿಚ್ಛೇದಿತ ಮಹಿಳೆ ಮತ್ತು ವಿಧವೆಯರಿಗೆ ವೈಯಕ್ತಿಕ ಹಾಗೂ ಸಾಮೂಹಿಕ ಮದುವೆ ಕಾರ್ಯಗಳಿಗೆ ಸಹಾಯಧನ ಒದಗಿಸಲು ಮುಂದಾಗಿದೆ. ಈ ಸೌಲಭ್ಯ ಪಡೆಯಲಿಚ್ಛಿಸುವ ಕುಟುಂಬದ ವಾರ್ಷಿಕ ವರಮಾನ ರು. 1,50,000ಕ್ಕಿಂತ ಕಡಿಮೆ ಇರಬೇಕು. ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಮದುವೆಯ ದಿನಾಂಕಕ್ಕೆ ವಧುವಿಗೆ 18 ವರ್ಷ ಹಾಗೂ ವರನಿಗೆ 21 ವರ್ಷ ವಯೋವುತಿಯಿರಬೇಕು. ರಾಜ್ಯದಲ್ಲಿ ಕನಿಷ್ಠ 3 ವರ್ಷದವರೆಗೆ ವಧು ವಾಸವಿರುವ ಬಗ್ಗೆ ದೃಢೀಕರಣ ದಾಖಲಾತಿ ಹಾಗೂ ಮದುವೆಯಾದ ನಂತರ ವಧು- ವರನ ಭಾವಚಿತ್ರ, ಧಾರ್ಮಿಕ ಸಂಸ್ಥೆ ನೀಡಿರುವ ಮದುವೆ ಪ್ರಮಾಣಪತ್ರ, ಉಪನೋಂದಣಾಧಿಕಾರಿಗಳು ನೀಡಿರುವ ಮದುವೆ ನೋಂದಣಿ ಪತ್ರ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೂ.ಸಂ-08392-275752ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ರಾಚಯ್ಯ ತಿಳಿಸಿದ್ದಾರೆ.
ಪದಾಧಿಕಾರಿಗಳ ಆಯ್ಕೆ
ಹೂವಿನಹಡಗಲಿ: ವಾಲ್ಮೀಕಿ ಯುವ ಸೇನೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರಾಗಿ ಟಿ. ಕೃಷ್ಣಪ್ಪ, ಅಧ್ಯಕ್ಷರಾಗಿ ಯು. ಮಂಜುನಾಥ, ಉಪಾಧ್ಯಕ್ಷರಾಗಿ ಡಾ.ಜೆ.ಡಿ. ಉಮೇಶ್, ಎಚ್. ನಾಗರಾಜ, ಕಾರ್ಯದರ್ಶಿಯಾಗಿ ಎಚ್. ಅಜ್ಜಪ್ಪ, ಖಜಾಂಚಿಯಾಗಿ ವಿ.ಕೆ. ಸಂದೀಪ, ಸಂಚಾಲಕರಾಗಿ ದೀಪದ ಹನುಮಂತಪ್ಪ, ಸಹಕಾರ್ಯದರ್ಶಿಯಾಗಿ ವೀರಣ್ಣ, ಸಂಘಟನಾ ಕಾರ್ಯದರ್ಶಿಯಾಗಿ ಚಿಂತಿ ತರುಣಕುಮಾರ ನೇಮಕವಾಗಿದ್ದಾರೆ. ಎಲ್.ಜಿ. ಹೊನ್ನಪ್ಪನವರ, ಯು. ಹನುಮಂತಪ್ಪ, ಚಿಂತಿ ಚಕ್ರಪತಿ, ಜೆ. ಪರಸಪ್ಪ, ದೀಪದ ಕೃಷ್ಣಪ್ಪ, ಪುರಸಭೆ ಸದಸ್ಯ ಯು. ಹನುಮಂತಪ್ಪ, ಎನ್. ಕೋಟೆಪ್ಪ, ನಾಗರಾಜ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.