ಎನ್ನೆಸ್ಸೆಸ್ ಶಿಬಿರ ಉದ್ಘಾಟನೆ
ಕೊಟ್ಟೂರು: ಯುವಕರು ಉಡಾಫೆ ಮತ್ತು ಆಲಸ್ಯತನ ತೊರೆದು ಸೇವಾ ಮನೋಭಾವ ರೂಢಿಸಿಕೊಂಡರೆ ಭವಿಷ್ಯದಲ್ಲಿ ಅತ್ಯುತ್ತಮ ನಾಯಕರಾಗಬಹುದು ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜ್ಞಾನಗುರು ವಿದ್ಯಾಪೀಠದ ಕಾರ್ಯದರ್ಶಿ ಎಂ.ಎಂ.ಜೆ. ಹರ್ಷವರ್ಧನ್ ಹೇಳಿದರು. ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಸೋಮವಾರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. ಎನ್ಎಸ್ಎಸ್ ಶಿಬಿರವನ್ನು ಕೇವಲ ಪ್ರಮಾಣ ಪತ್ರಕ್ಕಾಗಿ ಬಳಸಿಕೊಳ್ಳಲು ಮುಂದಾಗದೇ ನೈಜ ಸಾಮಾಜಿಕ ಕಾಳಜಿ ತೋರಬೇಕು ಎಂದು ಹೇಳಿದರು. ಜಿಪಂ ಸದಸ್ಯೆ ಎಸ್. ಶಾರದಾ ಪ್ರಸಾದ್ ಶಿಬಿರದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ ನಿವೃತ್ತ ಪ್ರಾಚಾರ್ಯ ಶಿವಾನಂದ, ಪ್ರಾದೇಶಿಕ ಗ್ರಾಮೀಣ ಬದುಕು, ಜನ, ಜೀವನ ಕುರಿತು ಜನಪದ ಗೀತೆಗಳನ್ನು ಹಾಡಿ ಗಮನಸೆಳೆದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಎನ್. ಬಸವರಾಜು ಮಾತನಾಡಿದರು. ಎನ್ಎಸ್ಎಸ್ ಶಿಬಿರಾಧಿಕಾರಿ ಡಾ. ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಮುನೇಗೌಡ ಸ್ವಾಗತಿಸಿದರು. ಉಪನ್ಯಾಸಕ ಗೋವಿಂದಪ್ಪ ನಿರೂಪಿಸಿದರು. ಉಪನ್ಯಾಸಕ ಎ.ಎಂ.ಎಸ್. ಸರ್ಪಭೂಷಣ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

