ನಾಳೆ ರಾಜ್ಯಮಟ್ಟದ ಬಾಸ್ಕೆಟ್ಬಾಲ್ ಪಂದ್ಯಾವಳಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 21
ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ 2013-14ನೇ ಸಾಲಿನ ರಾಜ್ಯ ಮಟ್ಟದ ಬಾಸ್ಕೆಟ್ಬಾಲ್ ಪಂದ್ಯಾವಳಿಯನ್ನು ಅ. 23ರಿಂದ ಮೂರು ದಿನಗಳ ಕಾಲ ಬಳ್ಳಾರಿ ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಇಲಾಖೆ ಉಪನಿರ್ದೇಶಕ ಎಚ್. ಅಬ್ದುಲ್ ರಶೀದ್ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪಂದ್ಯಾವಳಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಉದ್ಘಾಟಿಸಲಿದ್ದು, ಬಳ್ಳಾರಿ ಶಾಸಕ ಅನಿಲ್ ಲಾಡ್ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಪಂದ್ಯಾವಳಿಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಸದೆ ಜೆ. ಶಾಂತಾ, ಕೊಪ್ಪಳ ಸಂಸದ ಶಿವರಾಮಗೌಡ, ಶಾಸಕ ಬಿ. ಶ್ರೀರಾಮುಲು ಸೇರಿದಂತೆ ಜಿಲ್ಲೆಯ ಶಾಸಕರು, ಇಲಾಖೆ ನಿರ್ದೇಶಕ ಡಾ. ಎ.ಎಸ್. ರಾಮೇಗೌಡ, ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಎಸ್ಪಿ ಡಾ. ಚೇತನ್ಸಿಂಗ್ ರಾಥೋಡ್, ಪಾಲಿಕೆ ಆಯುಕ್ತ ಚಿಕ್ಕಣ್ಣ, ಡಿಡಿಪಿಐ ನಾರಾಯಣಗೌಡ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅ. 24 ಮತ್ತು 25ರಂದು ಪಂದ್ಯಾವಳಿಗಳು ನಡೆಯಲಿವೆ ಎಂದರು.
60ಕ್ಕೂ ಹೆಚ್ಚು ತಂಡಗಳು: ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿನಿಯರ, ವಿದ್ಯಾರ್ಥಿಗಳ 60ಕ್ಕೂ ಹೆಚ್ಚು ತಂಡಗಳು 700ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ.ವಿವಿಧ ಜಿಲ್ಲೆಗಳಿಂದ ಆಗಮಿಸುವ ತಂಡಗಳು ಅ. 23ರ ಮಧ್ಯಾಹ್ನ 2 ಗಂಟೆಯೊಳಗೆ ತಮ್ಮ ತಂಡಗಳ ಹೆಸರನ್ನು ನೋಂದಣಿ ಮಾಡಿಸಬೇಕು. ಅ. 24ರಂದು ಬೆಳಗ್ಗೆ 8ರಿಂದ ಪಂದ್ಯಗಳು ಆರಂಭವಾಗಲಿವೆ. ಪುರುಷರ ಪಂದ್ಯಗಳನ್ನು ನಗರದ ಹೊರವಲಯದ ನಂದಿ ಇಂಟರ್ನ್ಯಾಷನಲ್ ಪಿಯು ಕಾಲೇಜಿನಲ್ಲಿ, ವಿದ್ಯಾರ್ಥಿನಿಯರ ಪಂದ್ಯಗಳನ್ನು ಸುಧಾಕ್ರಾಸ್ ಬಳಿಯ ನಂದಿ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ವಿವರಿಸಿದರು.
ಊಟ, ವಸತಿ ವ್ಯವಸ್ಥೆ: ಬೆಂಗಳೂರು, ಮೈಸೂರು ವಿಭಾಗಗಳ ಬಾಲಕಿಯರ ತಂಡಗಳಿಗೆ ಚೈತನ್ಯ ಕಾಲೇಜಿನಲ್ಲಿ, ಗುಲ್ಬರ್ಗ ವಿಭಾಗಕ್ಕೆ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಕಾಲೇಜಿನಲ್ಲಿ, ಬೆಳಗಾವಿ ವಿಭಾಗಕ್ಕೆ ನಳಂದಾ ಪಿಯು ಕಾಲೇಜಿನಲ್ಲಿ ಹಾಗೂ ಬೆಂಗಳೂರು, ಗುಲ್ಬರ್ಗ, ಬೆಳಗಾವಿ ವಿಭಾಗಗಳ ಬಾಲಕರ ತಂಡಗಳಿಗೆ ಪ್ಯೂಪಿಲ್ ಟ್ರೀ ಕಾಲೇಜಿನಲ್ಲಿ, ಮೈಸೂರು ವಿಭಾಗಕ್ಕೆ ಸತ್ಯಂ ಕಾಲೇಜಿನಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಅ. 25ರಂದು ಸಂಜೆ ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದೆ.
ವಿಜೇತ ಹಾಗೂ ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಮೆಡಲ್ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಿಯು ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷ ಪ್ರಸಾದ್ರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕರಾದ ಜಂಬುನಾಥ್, ರಾಮಾಂಜನೇಯ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

