ಬಿಟಿ ಹತ್ತಿ ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯ
ಹೂವಿನಹಡಗಲಿ: ತಾಲೂಕಿನಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿರುವ ಕನಕ ಬಿಟಿ ಹತ್ತಿ ಬೆಳೆ ಹೂ, ಕಾಯಿ ಇಲ್ಲದೇ ಪೂರ್ಣ ನಷ್ಟವಾಗಿದೆ. ಈ ಕೂಡಲೇ ಸರ್ಕಾರ ಪರಿಹಾರ ನೀಡಬೇಕು ಎಂದು ಹೊಳಲು ರೈತ ಮುಖಂಡ ಕೊಡಬಾಳ ಚಂದ್ರಪ್ಪ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿ, ಕನಕ ಬಿಟಿ ಹತ್ತಿ ಕಂಪನಿ ಮಾಲೀಕರೊಂದಿಗೆ ಸರ್ಕಾರ ಚರ್ಚೆ ಮಾಡಿ ಶೀಘ್ರದಲ್ಲೇ ರೈತರಿಗೆ ಪರಿಹಾರ ವಿತರಣೆಗೆ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಚಮತ್ಕಾರ ಹತ್ತಿ ಬೀಜ ಕಳಪೆಯಾಗಿದ್ದರಿಂದ ನಷ್ಟ ಹೊಂದಿದ್ದ ರೈತರು ಉಪವಾಸ ಸತ್ಯಾಗ್ರಹ ಮಾಡಿದ್ದರು. ಅದನ್ನು ಗಮನಿಸಿದ ಅಂದಿನ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ, ಚಮತ್ಕಾರ ಹತ್ತಿ ಬೀಜ ಬಿತ್ತನೆ ಮಾಡಿದ್ದ ರೈತರಿಗೆ ಸೂಕ್ತ ಪರಿಹಾರ ವಿತರಣೆಗೆ ಕ್ರಮ ತೆಗೆದುಕೊಂಡಿದ್ದರು. ಅದೇ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಕೋ ಕಂಪನಿ ಮಾಲೀಕರ ಜತೆಗೆ ಮಾತನಾಡಿ ಕನಕ ಬಿಟಿ ಹತ್ತಿ ಬೀಜ ಬಿತ್ತನೆ ಮಾಡಿ ನಷ್ಟ ಹೊಂದಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

