ಬಳ್ಳಾರಿ

ಬಿಎಸ್‌ವೈ ಹೇಳಿಕೆಗೆ ಖಂಡನೆ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 22
ಸಿಎಂ ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಳ್ಳಾರಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಕರ್ತರು ಯಡಿಯೂರಪ್ಪ ಭಾವಚಿತ್ರ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ರಾಜ್ಯಾಧ್ಯಕ್ಷ ಬೆಣಕಲ್ ಮಲ್ಲಿಕಾರ್ಜುನ ಪಾಟೀಲ್ ನೇತೃತ್ವದಲ್ಲಿ ಸಂಘದ ನೂರಾರು ಕಾರ್ಯಕರ್ತರು ಕನಕದುರ್ಗಮ್ಮ ದೇವಸ್ಥಾನದಿಂದ ಮೆರವಣಿಗೆ ಮೂಲಕ ನಗರದ ಗಡಿಗಿ ಚೆನ್ನಪ್ಪ ವೃತ್ತಕ್ಕೆ ಆಗಮಿಸಿ, ಬಿಎಸ್‌ವೈ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕಲ್ಲುಕಂಬ ಪಂಪಾಪತಿ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇಂಥ ಹೇಳಿಕೆ ನೀಡುತ್ತಿದ್ದು, ಜಾತಿ ಆಧಾರದಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಿಂದುಳಿದ, ಅಲ್ಪಸಂಖ್ಯಾತರ, ದಲಿತರ ಏಳಿಗೆಗೆ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಬಡವರಿಗೆ ಅನ್ನಭಾಗ್ಯ, ಮಕ್ಕಳಿಗೆ ಕ್ಷೀರಭಾಗ್ಯ ಸೇರಿದಂತೆ ಇತರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಇವು ಮಾದರಿಯಾಗಲಿದ್ದು, ಇದರಿಂದಾಗಿ ಆತಂಕಗೊಂಡಿರುವ ಬಿಎಸ್‌ವೈ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಭತ್ರಿ ರಾಘವೇಂದ್ರ, ಕೆ. ಮಂಜುನಾಥ್, ಕೆಂಚಪ್ಪ, ಈರನಗೌಡ, ಶಿವಕುಮಾರ್, ಧನಂಜಯ, ಶಿವರಾಂ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.