ಶಿಕ್ಷಕರ ಮತದಾರ ಪಟ್ಟಿ ಪರಿಷ್ಕರಣೆ
ಹೊಸಪೇಟೆ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರಕ್ಕೆ ಡಿ 1, 2013 ಅನ್ನು ಅರ್ಹತಾ ದಿನವನ್ನಾಗಿ ಪರಿಗಣಿಸಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯಕ್ರಮ ಆರಂಭವಾಗಿದೆ.ಅರ್ಹತಾ ದಿನಾಂಕಕ್ಕೆ 3 ವರ್ಷಗಳ ಸತತ ಸೇವೆ ಸಲ್ಲಿಸಿದ ಪ್ರೌಢಶಾಲಾ ಮಟ್ಟಕ್ಕಿಂತ ಮೇಲ್ಪಟ್ಟ ಶಿಕ್ಷಕರು ತಮ್ಮ ಹೆಸರುಗಳನ್ನು ನಮೂನೆ-19ರಲ್ಲಿ ಭರ್ತಿ ಮಾಡಿ ಈ ಕೆಳಕಂಡ ಅಧಿಕಾರಿಗಳಿಗೆ ಅ. 30, 2013ರೊಳಗೆ ಸಲ್ಲಿಸಬಹುದಾಗಿದೆ. ಹೊಸಪೇಟೆ ಹೋಬಳಿಯ ಶಿಕ್ಷಕರು ಹೊಸಪೇಟೆ ತಹಸೀಲ್ದಾರರಲ್ಲಿ ಮತ್ತು ಕಮಲಾಪುರ ಹೋಬಳಿಯ ಶಿಕ್ಷಕರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಲ್ಲಿ, ಕಂಪ್ಲಿ ಹೋಬಳಿಯ ಶಿಕ್ಷಕರು ಕಂಪ್ಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಗಣಪತಿ ಲಮಾಣಿಯವರಲ್ಲಿ, ಮರಿಯಮ್ಮನಹಳ್ಳಿ ಹೋಬಳಿಯ ಶಿಕ್ಷಕರು ಮರಿಯಮ್ಮನಹಳ್ಳಿಯ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರಾಣೇಶ್ ಕುಲಕರ್ಣಿ ಅವರ ಬಳಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಹಸೀಲ್ದಾರ್ ರಮೇಶ್ ಕೋನರೆಡ್ಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

