ಬಳ್ಳಾರಿ

ಅನ್ನಪೂರ್ಣಾಬಾಯಿ ನಿಧನ

Published On :

ಹೊಸಪೇಟೆ: ಮಾಜಿ ಶಾಸಕ ದಿ. ಸತ್ಯನಾರಾಯಣ ಸಿಂಗ್ ಅವರ ಪತ್ನಿ ಅನ್ನಪೂರ್ಣಾ ಬಾಯಿ (78) ಭಾನುವಾರ ನಿಧನರಾಗಿದ್ದಾರೆ.
ಮೃತರಿಗೆ ಹೊಸಪೇಟೆ ಮಾಜಿ ಶಾಸಕ ರತನ್‌ಸಿಂಗ್ ಸೇರಿದಂತೆ ಕಾಂಗ್ರೆಸ್ ಮುಖಂಡ ದೀಪಕ್‌ಕುಮಾರ್ ಸಿಂಗ್, ಉದ್ಯಮಿಗಳಾದ ದಿಲೀಪ್ ಸಿಂಗ್, ಪ್ರವೀಣ್ ಸಿಂಗ್ ಹಾಗೂ ಪುತ್ರಿಯರಾದ ಅರುಣಾ ಬಾಯಿ, ಸಂಧ್ಯಾ, ಸುಜಾತಾ ಸಿಂಗ್ ಸೇರಿದಂತೆ ಮೊಮ್ಮಕ್ಕಳು ಮತ್ತು ಅಪಾರ ಬಂಧುಗಳು ಇದ್ದಾರೆ.
ಮೃತರ ಅಂತ್ಯಕ್ರಿಯೆ ಭಾನುವಾರ ಸಂಜೆ ನಗರದ ರಾಣಿಪೇಟೆಯಲ್ಲಿರುವ ತೋಟದ ಮನೆಯಲ್ಲಿ ನಡೆಯಿತು. ಬಳ್ಳಾರಿ ಶಾಸಕ ಅನಿಲ್ ಲಾಡ್, ಸಂಡೂರು ಶಾಸಕ ಈ. ತುಕರಾಂ, ಮಾಜಿ ಸಚಿವ ಎನ್.ಎಂ. ನಭಿಸಾಬ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಎಸ್‌ವಿಕೆ ಕುಟುಂಬದ ಸದಸ್ಯರು ಸೇರಿದಂತೆ ಅಪಾರ ಬಂಧು-ಬಳಗದವರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು.  
ಸಂತಾಪ: ಅನ್ನಪೂರ್ಣಾಬಾಯಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹರಪ್ಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ, ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ್, ಕಾಂಗ್ರೆಸ್ ಮುಖಂಡ ಎನ್.ವೈ. ಹನುಮಂತಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.