ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಕಾರ್ಯ
ಹೊಸಪೇಟೆ: ಶಾಲೆಯಿಂದ ಹೊರಗುಳಿದ 6ರಿಂದ 16 ವರ್ಷದ ಮಕ್ಕಳ ಸಮೀಕ್ಷೆ ಕಾರ್ಯ ನ. 6 ಮತ್ತು 7ರಂದು ನಡೆಯಲಿದ್ದು, ನ. 13ರಿಂದ 17ರ ವರೆಗೆ ಮೂರು ದಿನಗಳ ಕಾಲ ಕುಟುಂಬ ಸಮೀಕ್ಷೆ ನಡೆಯಲಿದ್ದು, ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ನಡೆಸುವ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಸಮೀಕ್ಷೆ ಕಾರ್ಯ ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ತಹಸೀಲ್ದಾರ್ ರಮೇಶ್ ಕೋನರಡ್ಡಿ ತಿಳಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ಗುರುವಾರ ನಡೆದ ಸಮೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಯಾವುದೇ ಮಕ್ಕಳು ಶಾಲೆಯಿಂದ ಹೊರ ಉಳಿಯದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಪ್ರತಿ ಮಗು ಶಾಲೆಗೆ ಹೋಗಿ ವಿದ್ಯೆ ಕಲಿಯಬೇಕಾಗಿದ್ದು, ನಾನಾ ಕಾರಣಗಳಿಂದ ಕೆಲ ಮಕ್ಕಳು ಶಿಕ್ಷಣ ಪೂರ್ಣಗೊಳಿಸದೇ ಶಾಲೆ ಬಿಟ್ಟು ಯಾವುದೋ ಕೆಲಸದಲ್ಲಿ ತೊಡಗಿರುವುದನ್ನು ಸಮೀಕ್ಷಾ ಸಮಿತಿಯವರು ಪತ್ತೆಹಚ್ಚಿ ಶಾಲೆಗೆ ಕರೆತರಬೇಕು ಎಂದರು.
ನಗರದ ಕೊಳಗೇರಿ ಪ್ರದೇಶಗಳಲ್ಲಿ, ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ, ಹೋಟೆಲ್, ಗ್ಯಾರೇಜ್, ಗಣಿಗಾರಿಕೆ ಪ್ರದೇಶ, ಬಂಡೆಗಾರಿಕೆ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮಕ್ಕಳು ಪತ್ತೆಯಾಗುವರು. ಅಂತವರನ್ನು ಪತ್ತೆ ಹಚ್ಚುವ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಬಿಇಒ ಪಿ. ಸುನಂದಾ ಮಾತನಾಡಿ, 6ರಿಂದ 16 ವರ್ಷದ ಶಾಲೆಯಿಂದ ಹೊರ ಉಳಿದ ಮಕ್ಕಳನ್ನು ಗುರುತಿಸುವುದು. ಮೊದಲ ಎರಡು ದಿನಗಳ ಕಾಲ ಶಾಲಾ ಸಮೀಕ್ಷೆ ನಡೆಸುವುದು. ನಂತರ ಕುಟುಂಬ ಸಮೀಕ್ಷೆ ನಡೆಸಿ ಶಾಲೆ ಬಿಟ್ಟ ಮಕ್ಕಳ ಸಾಮಾಜಿಕ ಹಿನ್ನೆಲೆ ಹಾಗೂ ಕಾರಣಗಳ ಬಗ್ಗೆ ತಿಳಿದು ಹಾಗೂ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಸಮೀಕ್ಷೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
ತಾಪಂ ಇಒ ರಮೇಶ್ ತಳವಾರ್, ಶಿಕ್ಷಣ ಇಲಾಖೆ ಅಧಿಕಾರಿ ಶಂಕ್ರಪ್ಪ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

