ಭ್ರೂಣ ಹತ್ಯೆ ನಿಲ್ಲಿಸಿ: ಸೈಕಲ್ ಜಾಥಾ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಅ. 27
ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಸಖಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿನಿಯರು ಗುರುವಾರ ನಗರದಲ್ಲಿ ಸೈಕಲ್ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಿದರು.
ನಗರದ ತಾಲೂಕು ಕ್ರೀಡಾಂಗಣದಿಂದ ಆರಂಭವಾದ ಸೈಕಲ್ ಜಾಥಾ, ವಿಜಯನಗರ ಕಾಲೇಜು ರಸ್ತೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ತಹಸೀಲ್ದಾರ್ ಕಚೇರಿ ರಸ್ತೆ, ರೋಟರಿ ವೃತ್ತ, ಪುಣ್ಯಮೂರ್ತಿ ವೃತ್ತ, ಮೂರು ಅಂಗಡಿ ಬಜಾರ್ ರಸ್ತೆ, ಮಸೀದಿ ರಸ್ತೆ, ಬಸವೇಶ್ವರ ವೃತ್ತ, ರಾಜಮದಕರಿ ನಾಯಕ ವೃತ್ತ, ಬಸ್ ನಿಲ್ದಾಣ ಇತರ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
2013ರ ಅಕ್ಟೋಬರ್ 20ರಿಂದ 31ರ ವರೆಗೆ ರಾಷ್ಟ್ರಮಟ್ಟದಲ್ಲಿ ಹೆಣ್ಣು ಮಕ್ಕಳ ಹಬ್ಬ ಆಚರಿಸುವ ಮೂಲಕ ಹೆಣ್ಣುಮಕ್ಕಳ ಹುಟ್ಟನ್ನು ಸಂಭ್ರಮಿಸಲಾಗುತ್ತದೆ. ನ. 25ರಿಂದ ರಾಜ್ಯದ 10 ಜಿಲ್ಲೆಗಳಲ್ಲಿ ಸೈಕಲ್ ಜಾಥಾ, ಸಾರ್ವಜನಿಕ ಸಭೆಗಳನ್ನು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಅ. 31ರಂದು ಬೆಂಗಳೂರಿನಲ್ಲಿ ಹೆಣ್ಣುಮಕ್ಕಳ ಉಳಿವಿಗಾಗಿ ಪಥಸಂಚಲನ, ಹೆಣ್ಣುಮಕ್ಕಳ ಬೈಕ್ ರ್ಯಾಲಿ ಮತ್ತು ಮೊಂಬತ್ತಿಯ ಮೆರವಣಿಗೆ ಮೂಲಕ ಹಬ್ಬದ ಸಮಾರೋಪ ನೆರವೇರಿಸಲಾಗುತ್ತದೆ.
1994ರ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪರೀಕ್ಷೆ ತಂತ್ರಜ್ಞಾನ (ಲಿಂಗ ಆಯ್ಕೆ ನಿಷೇದ) ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಮತ್ತು ರಾಜ್ಯ ಮಟ್ಟದ ಸಮಿತಿಗಳು ಕಾರ್ಯೋನ್ಮುಖಗೊಂಡು, ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆಯನ್ನು ನಿಲ್ಲಿಸಬೇಕು. ಲಿಂಗತ್ವ (ಜೆಂಡರ್) ಅಧ್ಯಯನ ಶಾಲಾ ಪಠ್ಯಕ್ರಮದ ಭಾಗವಾಗಬೇಕು ಎಂದು ಸಖಿ ಸಂಸ್ಥೆಯ ಪದಾಧಿಕಾರಿಗಳು ಒತ್ತಾಯಿಸಿದರು.
ಸಖಿ ಸಂಸ್ಥೆಯ ಕಾರ್ಯಕರ್ತರಾದ ನಸ್ರೀನ್, ರವಿ ಕನಹಳ್ಳಿ, ರೂಪಾ, ಫಾತಿಮಾ, ಶಿವಕುಮಾರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

