ಮೂಲ ಸೌಕರ್ಯಕ್ಕೆ ಸ್ಲಂ ನಿವಾಸಿಗಳ ಆಗ್ರಹ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಅ. 29
ಸ್ಲಂ ನಿವಾಸಿಗಳ ಮೂಲ ಸೌಲಭ್ಯಗಳ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಲಂ ಜನಜಾಗೃತಿ ಆಂದೋಲನ ಸಮಿತಿಯ ಪದಾಧಿಕಾರಿಗಳು ಸೋಮವಾರ ಹೊಸಪೇಟೆಯಲ್ಲಿ ರ್ಯಾಲಿ ನಡೆಸಿದರು.
ಸ್ಲಂ ಜನಾಜಗೃತಿ ಅಂದೋಲನ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ರಾಮಚಂದ್ರ ಮಾತನಾಡಿ, ನಗರ ಭೂಮಿ ಕಾಯ್ದೆಯನ್ನು ರಾಜ್ಯದಲ್ಲಿ ಪುನಃ ಜಾರಿಗೆ ತರಬೇಕು. ಆ ಮೂಲಕ ಸ್ಲಂ ನಿವಾಸಿಗಳ ಜನಸಂಖ್ಯೆ ಅನುಪಾತದಲ್ಲಿ ನಗರದ ಭೂಮಿ ಹಂಚಿಕೆ ಮಾಡಬೇಕು. ಇದಕ್ಕಾಗಿ ನಗರ ಭೂಮಿ ಹಂಚಿಕೆ ನೀತಿಯನ್ನು ರೂಪಿಸಿ ಜಾರಿಗೊಳಿಸಬೇಕು. ಪುರಸಭೆ, ನಗರಸಭೆ, ನಗರ ಪಾಲಿಕೆಗಳಿಗೆ ಈಗಾಗಲೇ ಕೇಂದ್ರದ ನಗರಾಭಿವೃದ್ಧಿ ಮತ್ತು ಬಡತನ ನಿರ್ಮೂಲನ ಸಚಿವಾಲ ಸೂಚನೆ ಮತ್ತು ಸ್ಲಂ ನಿವಾಸಿಗಳ ರಾಷ್ಟ್ರೀಯ ಮಾದರಿ ಆಸ್ತಿ ಹಕ್ಕು 2011ರ ಅನ್ವಯ ಸ್ಲಂ ಅಭಿವೃದ್ಧಿಗೆ ಶೇ. 25ರಷ್ಟು ಹಣವನ್ನು ಬಜೆಟ್ಗಳಲ್ಲಿ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2009ರಲ್ಲಿ ಅನುಷ್ಠಾನಗೊಳಿಸುತ್ತಿರುವ ಶೇ. 25ರ ಅನುಪಾತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವರದಾನವಾಗಿದ್ದು, ಕೇಂದ್ರದ ಮೇಲೆ ಒತ್ತಡ ತಂದು ಎಲ್ಲ ಮಕ್ಕಳಿಗೆ ಸಮಾನ ಶಿಕ್ಷಣ ಜಾರಿಗೊಳಿಸುವಂತೆ ಮಾಡಬೇಕು. ಸರ್ಕಾರಿ ಶಾಲೆಗಳನ್ನು ಮತ್ತಷ್ಟು ತೆರೆದು ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಸಮಿತಿಯ ಅಧ್ಯಕ್ಷ ಕೆ. ಸುನೀಲ್, ಪ್ರಧಾನ ಕಾರ್ಯದರ್ಶಿ ಎನ್. ಹುಲಿಗೆಮ್ಮ, ಮಹಿಳಾ ಘಟಕದ ಅಧ್ಯಕ್ಷೆ ಮೈಮುನ್ನೀಸಾ, ಮುಖಂಡರಾದ ರಾಮಾಂಜನಿ, ಹನುಮಂತರಾಯ, ವೆಂಕಮ್ಮ, ಸಸ್ನೀನ್, ಮಂಜುನಾಥ, ಲಿಯಾಖತ್ ಅಲಿ ಸೇರಿದಂತೆ ಇತರರು ರ್ಯಾಲಿಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

