ಮಹಿಳೆಯರು ಕಾನೂನು ಅರಿಯಿರಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 30
ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಯಲು ಮಹಿಳೆಯರಿಗೆ ಕಾನೂನಿನ ಅರಿವು ಅತ್ಯಗತ್ಯವಾಗಿದೆ ಎಂದು ಬಳ್ಳಾರಿಯ ಒಂದನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಎಂ.ಎಸ್. ಪಾಟೀಲ್ ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಜಂಟಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಡಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯಿದೆ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರ ರಕ್ಷಣೆಗಿರುವ ಕಾನೂನುಗಳ ಕುರಿತಾಗಿ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದರು.
ಮಹಿಳೆಯರಿಗೆ ಆಸ್ತಿ ಹಕ್ಕು, ವರದಕ್ಷಿಣೆ ನಿಷೇಧ ಕಾಯ್ದೆ, ಜನನ-ಮರಣ ನೋಂದಣಿಯ ಅವಶ್ಯಕತೆ, ಮಹಿಳೆಯಾರಿಗಾಗಿ ಜಾರಿಯಲ್ಲಿರುವ ಮತ್ತಿತರ ಹಲವಾರು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಚ್. ಶಾಂತಾ ಮಾತನಾಡಿ, ಮಹಿಳೆಯರು ಕಾನೂನು ಅರಿವು ಹೊಂದುವುದರೊಂದಿಗೆ ಎಲ್ಲ ಕ್ಷೇತ್ರಗಳಲ್ಲಿಯೂ ಕ್ರಿಯಾಶೀಲರಾಗಿ ಭಾಗವಹಿಸಬೇಕು. ಅಲ್ಲದೆ ತಮ್ಮ ಕಾರ್ಯಕ್ಷೇತ್ರದ ಸ್ಥಳಗಳಲ್ಲಿ ನೋಂದ ಮಹಿಳೆಯರಿಗೆ ಜಾಗೃತಿ ಮೂಡಿಸಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಪಿ. ಸಿದ್ದಾರೆಡ್ಡಿ ಮಾತನಾಡಿ, ಮಹಿಳೆಯರು ತಮ್ಮ ರಕ್ಷಣೆಗೆ ಇರುವ ಕಾನೂನಿನ ಅರಿವು ಪಡೆದುಕೊಂಡು, ಸಮಾಜ ಮುಖಿಯಾಗಿ ಜೀವನ ಸಾಗಿಸಬೇಕು. ಉಚಿತ ಕಾನೂನು ನೆರವಿನ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಎಸ್. ಕಲಾದಗಿ ಮಾತನಾಡಿ, ಇಲಾಖೆಯು ಮಹಿಳಾ ದೌರ್ಜನ್ಯ, ಕೌಟುಂಬಿಕ ಮಹಿಳಾ ದೌರ್ಜನ್ಯ ಕುರಿತಂತೆ ಅರಿವು ಮೂಡಿಸುವ ಉದ್ದೇಶದಿಂದ ಗ್ರಾಮ ಮಟ್ಟಗಳಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.
ವಕೀಲರಾದ ವಿಜಯಲಕ್ಷ್ಮಿ ಮೈದೂರು ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆ.ಎನ್. ಚಂದ್ರನಾಯಕ್, ಮಕ್ಕಳ ರಕ್ಷಣಾಧಿಕಾರಿ ಮೊಹಮ್ಮದ್ ಸರ್ವರ್, ಸಿಡಿಪಿಒ ಜಿ.ಕೆ. ಕೃಷ್ಣಮ್ಮ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು. ಸಿಡಿಪಿಒ ಸೋಮಶೇಖರಪ್ಪ ಸ್ವಾಗತಿಸಿದರು. ಅಧೀಕ್ಷಕ ಕೊಟ್ರಪ್ಪ ನಿರೂಪಿಸಿದರು.
ಮಹಿಳೆಯರು ಕಾನೂನು ಅರಿವು ಹೊಂದುವುದರೊಂದಿಗೆ ಎಲ್ಲ ಕ್ಷೇತ್ರಗಳಲ್ಲಿಯೂ ಕ್ರಿಯಾಶೀಲರಾಗಿ ಭಾಗವಹಿಸಬೇಕು. ಅಲ್ಲದೆ ತಮ್ಮ ಕಾರ್ಯಕ್ಷೇತ್ರದ ಸ್ಥಳಗಳಲ್ಲಿ ನೊಂದ ಮಹಿಳೆಯರಿಗೆ ಜಾಗೃತಿ ಮೂಡಿಸಬೇಕು.
- ಎಂ.ಎಚ್. ಶಾಂತಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

