ಬಳ್ಳಾರಿ

ಕಳ್ಳರ ಸೆರೆ: 5 ಬೈಕ್ ವಶ

Published On :

ಬಳ್ಳಾರಿ: ನಗರದ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಟೇಲ್ ನಗರ ಪಾರ್ಕ್ ಬಳಿ ಮೋಟರ್ ಸೈಕಲ್ ಕಳುವು ಮಾಡಿದ್ದ ಬುಶಪ್ಪ ಹಾಗೂ ರಾಜೇಶ್ ಅಲಿಯಾಸ್ ಗುಂಡ ಎನ್ನುವ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ ರು. 1.17 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 5  ಮೋಟರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚೇತನ್ ಸಿಂಗ್ ರಾಥೋರ್ ತಿಳಿಸಿದ್ದಾರೆ. ಪೊಲೀಸರು ಗುರುವಾರ ಬೆಳಗ್ಗೆ 8.45ಕ್ಕೆ ನಗರ ಉಪವಿಭಾಗದ ಡಿಎಸ್ಪಿ ಟಿ.ಎಸ್. ಮುರುಗಣ್ಣನವರ್ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸುವಾಗ ಈ ಇಬ್ಬರು ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗಾಂಧಿನಗರ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ನಜೀರ್ ಅಹ್ಮದ್, ಎಎಸ್‌ಐ ಕೆ.ಎ. ಬಸವರಾಜ, ಸಿಬ್ಬಂದಿ ಪಿ.ಕೆ. ಜಟಿಂಗಪ್ಪ, ಟಿ. ಜಂಜಣ್ಣ, ರಾಜಕುಮಾರ್. ಎಸ್., ವೀರೇಶ.ಆರ್., ಮಲ್ಲನಗೌಡ ಹಾಗೂ ಪಿಸಿಗಳಾದ ಕೆ. ನಾಗರಾಜ್, ಕೆ. ಸಿದ್ದಪ್ಪ, ಅನ್ವರ್, ಶಿವಾಜಿರಾವ್, ಉಮೇಶ ರೆಡ್ಡಿ, ದಾರಾಸಿಂಗ್ ಮತ್ತು ಜೆ. ಶಿವಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚುವರಿ ಎಸ್ಪಿ ಸಿ.ಕೆ. ಬಾಬಾ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.