ಬಳ್ಳಾರಿ

ನಾನು ಯಾವುದೇ ತಪ್ಪು ಮಾಡಿಲ್ಲ: ಕೊಂಡಯ್ಯ

Published On :

ಬಳ್ಳಾರಿ: ತಾವು ಯಾವುದೇ ತಪ್ಪು ಮಾಡಿಲ್ಲ, ಮಾಡುವುದು ಇಲ್ಲ. ಯಾರೋ ಕಾಣದ ಕೈಗಳಿಂದ ಮಾಧ್ಯಮಗಳ ಮೂಲಕ ತಮ್ಮನ್ನು ತೇಜೋವಧೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಕೆ.ಸಿ. ಕೊಂಡಯ್ಯ ತಿಳಿಸಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮಾಧ್ಯಮಗಳಲ್ಲಿ ಬಿಂಬಿಸಿದಂತೆ ತಾವು ಆ ಸ್ಥಳದಲ್ಲಿ ವಾಣಿಜ್ಯ ಸಂಕೀರ್ಣದ ಮೂಲಕ ವ್ಯವಹಾರ ಮಾಡುತ್ತಿಲ್ಲ. ಸಾಮಾಜಿಕ ಚಟುವಟಿಕೆಗಳ ಉದ್ದೇಶದಿಂದ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಈ ಕುರಿತಾಗಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿದರು.
ಟ್ರಸ್ಟ್‌ನಲ್ಲಿ ಕುಟುಂಬದ ಸದಸ್ಯರಾಗಬಾರದೆಂಬ ನಿಯಮವೇನಿಲ್ಲ, ಟ್ರಸ್ಟ್‌ನಲ್ಲಿ ಕುಟುಂಬದವರು, ಸ್ನೇಹಿತರು ಸದಸ್ಯರಾಗಿದ್ದಾರೆ, ಆದರೂ ಕೆಲ ಮಾಧ್ಯಮದವರು ಕುಟುಂಬದ ಸದಸ್ಯರನ್ನೇ ವೈಭವೀಕರಿಸಿ ತೇಜೋವಧೆ ಮಾಡುವ ಪ್ರಯತ್ನ ಮಾಡಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ತಪ್ಪು ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಕಚೇರಿಗಾಗಿ ನಿವೇಶನ ಮಂಜೂರಿಗಾಗಿ 2001 ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ರಾಜಕೀಯ ಪಕ್ಷಕ್ಕೆ ನೀಡಬಾರದು ಎಂದು ಸ್ವಷ್ಟಪಡಿಸಿದ್ದರು, ಇದರಿಂದಾಗಿ ಪ್ರಯತ್ನವನ್ನು ಕೈ ಬಿಡಲಾಗಿತ್ತು. ಇದೀಗ ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳ, ಏಳು ಜನರ ಸದಸ್ಯರನ್ನೊಳಗೊಂಡ ಕಾನೂನು ಪ್ರಕಾರ ರಚಿತವಾದ ಟ್ರಸ್ಟ್‌ಗೆ ನಿವೇಶನ ಮಂಜೂರಾಗಿದ್ದು, ಜನಪರ ಉದ್ದೇಶಕ್ಕಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ದಾಖಲೆ ಸಮೇತ ಬಹಿರಂಗ ಪಡಿಸಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾಂಗ್ರೆಸ್ ಮುಖಂಡರಾದ ಎನ್. ಪ್ರತಾಪ್ ರೆಡ್ಡಿ, ಗಾದೆಪ್ಪ, ಪಾಲಿಕೆ ಸದಸ್ಯರಾದ ಪ್ರಭಾಕರ್, ಬಸವರಾಜ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.