ಬಳ್ಳಾರಿ

ಬಂಧಿತ ಶಾಸಕರ ರಾಜಿನಾಮೆಗೆ ಸಿಪಿಎಂ ಆಗ್ರಹ

Published On :

ಹೊಸಪೇಟೆ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಆನಂದ್ ಸಿಂಗ್ ಮತ್ತು ಇತರ ಶಾಸಕರ ರಾಜಿನಾಮೆಗೆ ಒತ್ತಾಯಿಸಿ ಸಿಪಿಎಂ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿ ಅಧಿಕಾರಿಯ ಮೂಲಕ ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಿದರು.
ಸಿಪಿಎಂ ಮುಖಂಡ ಆರ್. ಭಾಸ್ಕರ್ ರೆಡ್ಡಿ ಮಾತನಾಡಿ, ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಮತ್ತು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್, ಕಂಪ್ಲಿ ಕ್ಷೇತ್ರದ ಶಾಸಕ ಟಿ.ಎಚ್. ಸುರೇಶ್ ಬಾಬು, ಕೂಡ್ಲಿಗಿ ಕ್ಷೇತ್ರದ ಶಾಸಕ ನಾಗೇಂದ್ರ, ಕಾರವಾರ ಶಾಸಕ ಸತೀಶ್ ಸೈಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕರ ಬಂಧನದ ಬಳಿಕ ಕ್ಷೇತ್ರದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಜನರು ನಿತ್ಯವೂ ಕಚೇರಿಗಳಿಗೆ ಅಲೆದಾಡಿದರೂ ಯಾವುದೇ ಸರ್ಕಾರಿ ಕೆಲಸಗಳು ಸುಸೂತ್ರವಾಗಿ ನಡೆಯುತ್ತಿಲ್ಲ. ಅಧಿಕಾರಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ಕ್ಷೇತ್ರದ ಸಮಸ್ಯೆಗಳಿಗೆ ಕೇವಲ ಆಡಳಿತಾತ್ಮಕವಾಗಿ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಹೊರತು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗುತ್ತಿಲ್ಲ ಎಂದು ಅವರು ಆರೋಪಿಸಿದರು.
ಸಿಪಿಎಂನ ಮುಖಂಡ ಎ. ಕರುಣಾನಿಧಿ ಮಾತನಾಡಿ, ಜಿಲ್ಲೆಯ ಹೊಸಪೇಟೆ, ಕಂಪ್ಲಿ, ಕೂಡ್ಲಿಗಿ ಶಾಸಕರು ನೈಜ ಪ್ರಜಾಪ್ರಭುತ್ವವನ್ನು ಭ್ರಷ್ಟಗೊಳಿಸಿ ಅದನ್ನು ಅಪಮಾನಿಸಿದ್ದಾರೆ. ಗಣಿ ಹಗರಣದಲ್ಲಿ ಭಾಗಿಯಾದ ಶಾಸಕರಾದ ಆನಂದ್ ಸಿಂಗ್, ಟಿ.ಎಚ್. ಸುರೇಶ್‌ಬಾಬು, ನಾಗೇಂದ್ರ ಸತೀಶ್ ಸೈಲ್ ತಕ್ಷಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಿಪಿಎಂನ ಮುಖಂಡರಾದ ಎಂ. ಗೋಪಾಲ್, ಬಿ. ಮಹೇಶ್, ಕೆ. ನಾಗರತ್ನಮ್ಮ ಸಭೆಯಲ್ಲಿ ಮಾತನಾಡಿದರು. ಕಲ್ಯಾಣಯ್ಯ, ಕೆ.ಎಂ. ಸಂತೋಷ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.