ಬಳ್ಳಾರಿ

ಮಟ್ಕಾ: ಇಬ್ಬರ ಬಂಧನ

Published On :

ಹುಬ್ಬಳ್ಳಿ: ನಗರದ ದಾಜಿಬಾನ್ ಪೇಟೆ ಮತ್ತು ಕುಸುಗಲ್ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಟ್ಕಾ ಆಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಾಜಿಬಾನ್ ಪೇಟೆಯ ದುರ್ಗಾದೇವಿ ದೇವಸ್ಥಾನದಲ್ಲಿ ಮಟ್ಕಾ ಆಡುತ್ತಿದ್ದ ಗಣೇಶ ಲಕ್ಷ್ಮಣಸಾ ಜಡಿ ಎಂಬ ಆರೋಪಿಯನ್ನು ಬಂಧಿಸಿ ಆತನಿಂದ ರು. 1,240ಗಳನ್ನು ಉಪನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುಸುಗಲ್ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಟ್ಕಾ ಆಡುತ್ತಿದ್ದ ಅಹ್ಮದ್ ಅಲಿ ಮುಷ್ತಾಕ್ ಅಲಿ ಸುಟಗಾರ ಎಂಬ ಆರೋಪಿಯನ್ನು ಬಂಧಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಬಂಧಿತನಿಂದ ರು. 1,530ಗಳನ್ನು ವಶಪಡಿಸಿಕೊಂಡಿದ್ದಾರೆ.
ಯುವತಿ ನಾಪತ್ತೆ: ದೂರು
ಹುಬ್ಬಳ್ಳಿ: ಬಹಿರ್ದೇಸೆಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಗೆ ಹೋದ ಯುವತಿಯೊಬ್ಬಳು ಕಾಣೆಯಾಗಿರುವ ಕುರಿತು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಲಕ್ಷ್ಮಿ ದ್ಯಾಮಪ್ಪ ನೀರಲಕಟ್ಟಿ(19) ಎಂಬ ಯುವತಿ ನಾಪತ್ತೆಯಾಗಿದ್ದಾಳೆ. ನೀಲಿ ಬಣ್ಣದ ಚೂಡಿದಾರ ಹಾಕಿಕೊಂಡಿದ್ದು, ಸಾದಗಪ್ಪು ಬಣ್ಣ, ಗುಂಡುಮುಖವಿದೆ. ಕನ್ನಡ ಮಾತನಾಡುತ್ತಾಳೆ. ಯುವತಿಯ ಕುರಿತು ಸುಳಿವು ಸಿಕ್ಕಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ದೂರವಾಣಿ: 0836-2233214 ಅಥವಾ 2233201ನ್ನು ಸಂಪರ್ಕಿಸುವಂತೆ ಪೊಲೀಸ್ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.

ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು
ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯ ರಾಧಾಕೃಷ್ಣ ನಗರದ ಮನೆಯೊಂದರ ಹಿತ್ತಿಲ ಬಾಗಿಲಿಗೆ ಹಾಕಿದ್ದ ಲಾಕ್ ಮುರಿದು ಸುಮಾರು ರು. 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ರಾಧಾಕೃಷ್ಣ ನಗರದ ಅರುಣ ಬದಾಮಿ ಅವರ ಮನೆಯ ಹಿತ್ತಿಲಿ ಬಾಗಿಲಿನ ಲಾಕ್ ಮುರಿದ ಕಳ್ಳರು 3 ತೊಲೆ ಚಿನ್ನಾಭರಣ 750 ಗ್ರಾಂ ಬೆಳ್ಳಿ ಆಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.