ಹಜ್‌ಹೌಸ್ ನಿರ್ಮಾಣ ಶೀಘ್ರ ಪೂರ್ಣ: ಶ್ರೀರಾಮುಲು
ಬಳ್ಳಾರಿ: ಹಜ್ ಯಾತ್ರೆಗೆ ತೆರಳುವವರು, ತಂಗಲು ಅನುಕೂಲವಾಗುವ ಉದ್ದೇಶದಿಂದ ಬಳ್ಳಾರಿಯಲ್ಲಿ ಹಜ್‌ಹೌಸ್ ನಿರ್ಮಾಣ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಬಿ. ಶ್ರೀರಾಮುಲು ಅವರು ತಿಳಿಸಿದರು.
ಭಾನುವಾರ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಹಜ್ ಯಾತ್ರಿಕರಿಗೆ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಹಜ್‌ಯಾತ್ರೆ ಕೈಗೊಂಡವರೆಲ್ಲ ರಾಜ್ಯಕ್ಕೆ ಉತ್ತಮ ಮಳೆ, ಬೆಳೆ ಬರಲಿ, ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಬಾಂಧವ್ಯ ಉತ್ತಮವಾಗಿರಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದರು.
ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಅವರು ಮಾತನಾಡಿ, ಜೀವನದಲ್ಲಿ ಎಷ್ಟೇ ಸಾಧನೆ ಮಾಡಿದರೂ, ಅಭಿವೃದ್ಧಿ ಹೊಂದಿದರೂ, ಹಜ್ ಯಾತ್ರೆ ಮಾಡಿದರೆ ಬದುಕು ಪರಿಪೂರ್ಣ ಎನ್ನುವ ಭಾವನೆ ಮುಸ್ಲಿಂ ಬಾಂಧವರಲ್ಲಿದೆ ಎಂದು ತಿಳಿಸಿದರು.
ಬಳ್ಳಾರಿ ಶಾಸಕ ಅನಿಲ್ ಎಚ್. ಲಾಡ್ ಮಾತನಾಡಿ, ಬಳ್ಳಾರಿಗೆ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ಮುಸ್ಲಿಂ ಸಮುದಾಯ ಮಕ್ಕಳಿಗೆ ಪ್ರತ್ಯೇಕ ವಸತಿ ನಿಲಯ ಸೌಲಭ್ಯ ಕಲ್ಪಿಸಿ ಕೊಡುವ ಕುರಿತಾಗಿ ಚಿಂತನೆ ನಡೆಸಲಾಗುತ್ತಿದೆ. ಅಲ್ಲದೆ ಮುಸ್ಲಿಂ ವಿದ್ಯಾರ್ಥಿಗಳಿಂದ ಈ ಬೇಡಿಕೆ ಇದೆ ಎಂದು ತಿಳಿಸಿದರು.
ಡಾ. ನಾಸಿರ್ ಹುಸೇನ್, ದಾದಾಸಾಹೇಬ್, ರಿಜ್ವಾನ್ ಕಾರ್ಯಕ್ರಮ ನಿರ್ವಹಿಸಿದರು. ತರಬೇತಿ ಶಿಬಿರದಲ್ಲಿ ರಾಯಚೂರು, ಕೊಪ್ಪಳ, ಹಾವೇರಿ, ಚಿತ್ರದುರ್ಗ, ದಾವಣಗೆರೆ ಮುಂತಾದ ಏಳು ಜಿಲ್ಲೆಗಳಿಂದ ತೆರಳುವ ನೂರಾರು ಯಾತ್ರಿಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಲತೀಫ್, ಇಕ್ಬಾಲ್ ಸಾಬ್, ದಾದಾಪೀರ್, ಕನೇಕಲ್ ಮೆಹಬೂಬ್ ಸಾಬ್, ಹುಮಾಯೂನ್ ಖಾನ್, ಹಜೀಜ್ ಸಾಬ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

