ಪತ್ರಕರ್ತೆ ಮೇಲೆ ಅತ್ಯಾಚಾರ: ಖಂಡನೆ
ಹಗರಿಬೊಮ್ಮನಹಳ್ಳಿ: ಪೋಟೋ ಪತ್ರಕರ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರ ಮೇಲೆ ಉಗ್ರ ಕ್ರಮ ಕೈಗೊಳ್ಳಬೇಕು. ನೊಂದಿರುವ ಪತ್ರಕರ್ತೆಯ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಗರಿಬೊಮ್ಮನಹಳ್ಳಿ ತಾಲೂಕ ಘಟಕ ಆಗ್ರಹಿಸಿದೆ. ಸೋಮವಾರ ಸಂಘದ ಅಧ್ಯಕ್ಷ ವೀರೇಶ ಮಜ್ಜಿಗಿ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಸಾಮೂಹಿಕ ಅತ್ಯಾಚಾರ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸದಸ್ಯರು, ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಉಗ್ರ ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು. ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರಗಳು ನೊಂದಿರುವ ಪತ್ರಕರ್ತೆ ಬದುಕಿಗೆ ಅರ್ಥಿಕ ಭದ್ರತೆ ಕಲ್ಪಿಸಬೇಕೆಂದು ಒತ್ತಾಯಿಸಿದರು. ಮಹಿಳೆಯರು ಹೆಚ್ಚಾಗಿ ಪತ್ರಿಕಾರಂಗಕ್ಕೆ ಬರುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಹಿಳಾ ಪತ್ರಕರ್ತರ ಮೇಲೆ ಸಾಮೂಹಿಕ ಅತ್ಯಾಚಾರದಂತಹ ಘಟನೆಗಳು ನಡೆದರೆ ಈ ಕ್ಷೇತ್ರದತ್ತ ಮಹಿಳೆಯರು ಬರುವುದು ಕಷ್ಟ. ಆದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪತ್ರಕರ್ತರಿಗೆ, ಅದರಲ್ಲೂ ಪತ್ರಕರ್ತೆಯರಿಗೆ ವಿಶೇಷ ರಕ್ಷಣೆ ವ್ಯವಸ್ಥೆ ಕಲ್ಪಿಸುವಂತೆ ಸಂಘ ಮನವಿ ಮಾಡಿಕೊಂಡಿದೆ. ಸಂಘದ ಹಿರಿಯ ಸದಸ್ಯರಾದ ಹುಳ್ಳಿಪ್ರಕಾಶ, ಬುಡ್ಡಿ ಬಸವರಾಜ, ಜೆ.ನಾಗರಾಜ, ಬಿ.ಕೆ. ಬಸವರಾಜ, ಅಂಬರೀಷ್, ಶಿವಶಂಕರ, ಉಮಾಪತಿ ಶೆಟ್ಟರ್, ಫಕ್ರುದ್ದೀನ್, ರಾಜವಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

