ಬಳ್ಳಾರಿ

ಮೂಲ ಸೌಕರ್ಯಕ್ಕಾಗಿ ಕರವೇ ಪಾದಯಾತ್ರೆ

Published On :

ಬಳ್ಳಾರಿ: ತಾಲೂಕಿನ ಬೆಳಗಲ್ಲು ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು, ಗ್ರಾಮಗಳ ಹೊರವಲಯಗಳಲ್ಲಿ ಸ್ಥಾಪನೆಯಾಗಿರುವ ಕಾರ್ಖಾನೆಗಳಲ್ಲಿ ಈ ಭಾಗದ ಗ್ರಾಮಗಳ ಯುವಕರಿಗೆ ಆದ್ಯತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಗೌಡ ಬಣ)ಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೆಳಗಲ್ಲು ಗ್ರಾಮದಿಂದ ಬಳ್ಳಾರಿ ಡಿಸಿ ಕಚೇರಿ ವರೆಗೆ ಸೋಮವಾರ ಪಾದಯಾತ್ರೆ ನಡೆಸಿದರು.
ಕರವೇ ಜಿಲ್ಲಾಧ್ಯಕ್ಷ ಜೆ.ಎಂ. ಬಸವರಾಜಸ್ವಾಮಿ ಮಾತನಾಡಿ, ಬೆಳಗಲ್ಲು ಗ್ರಾಪಂ ವ್ಯಾಪ್ತಿಯ ಬಿ. ಬೆಳಗಲ್ಲು, ಬೆಳಗಲ್ಲು ತಾಂಡಾ, ಜಾನೆಕುಂಟೆ, ಜಾನೆಕುಂಟೆ ತಾಂಡಾ, ಹರಗಿನಡೋಣಿ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಕುಡಿಯುವ ನೀರು, ರಸ್ತೆ, ಶೌಚಾಲಯ, ಬಸ್ ಸೌಲಭ್ಯ, ಶಾಲೆ ಕಾಂಪೌಂಡ್ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಕರವೇ ಜಿಲ್ಲಾ ಗೌರವಾಧ್ಯಕ್ಷ ಅಸುಂಡಿ ನಾಗರಾಜ, ಜಿಲ್ಲಾ ಮುಖಂಡರಾದ ಎಂ. ಮೃತ್ಯುಂಜಯಸ್ವಾಮಿ, ನಗರಾಧ್ಯಕ್ಷ ಜಗನ್, ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್, ಉಪಾಧ್ಯಕ್ಷ ಕೋಳೂರು ತಿಪ್ಪಾರೆಡ್ಡಿ, ತಾಲೂಕು ಘಟಕಾಧ್ಯಕ್ಷ ಶಂಕರ್ ಕಗ್ಗಲ್, ಕಿಶೋರ್, ಮಹೇಶ್ ಬಣಕಾರ, ಎರ್ರಗುಡಿ ತಿಮ್ಮಪ್ಪ, ಬೆಳಗಲ್ಲು ಗ್ರಾಮ ಘಟಕ ಅಧ್ಯಕ್ಷ ವಿರೂಪಾಕ್ಷಿ, ಶ್ರೀನಿವಾಸ, ಮುಂಡ್ರಿಗಿ ರಾಜಶೇಖರ್, ಯುವರಾಜಗೌಡ, ಅಮರೇಶ್, ಸುಮಾ ರೆಡ್ಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.