ಮತದಾರರ ಗುರುತಿನ ಚೀಟಿಗಾಗಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಸೆ. 3
ಮತದಾರರ ಗುರುತಿನ ಕಾರ್ಡ್ ವಿತರಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಘಟಕದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಡಿವೈಎಫ್ಐ ಸಂಘಟನೆ ಜಿಲ್ಲಾ ಅಧ್ಯಕ್ಷ ಬಿಸಾಟಿ ಮಹೇಶ್ ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರಿಗೆ ಮತದಾರರ ಗುರುತಿನ ಚೀಟಿ ವಿತರಿಸಬೇಕು. ಇದಕ್ಕಾಗಿ ವರ್ಷಪೂರ್ತಿ ಕಚೇರಿಯೊಂದನ್ನು ತೆರೆಯಬೇಕು. ಕಾರ್ಡ್ಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಡಬೇಕು. ಈಗಾಗಲೇ ಕೊಟ್ಟ ಅರ್ಜಿಗಳನ್ನು ಪರಿಶೀಲಿಸಿ ತಕ್ಷಣವೇ ಗುರುತಿನ ಚೀಟಿ ಕೊಡಬೇಕು. ವಯಸ್ಸಿನ ದಾಖಲಾತಿ ಇಲ್ಲದೇ ಇರುವವರಿಗೆ ಇತರೆ ವ್ಯವಸ್ಥೆಯನ್ನು ಮಾಡಬೇಕು. ಅಂದರೆ ಸರ್ಕಾರಿ ವೈದ್ಯರು ಕೊಟ್ಟ ವಯಸ್ಸಿನ ಪ್ರಮಾಣ ಪತ್ರವನ್ನು ಪರಿಗಣಿಸಬೇಕು. ಮಧ್ಯವರ್ತಿಗಳ ಹಾವಳಿಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ತಕ್ಷಣವೇ ಅಧಿಕಾರಿಗಳು ಪ್ರತಿಯೊಬ್ಬರಿಗೂ ಗುರುತಿನ ಚೀಟಿ ವಿತರಿಸಲು ಮುಂದಾಗಬೇಕು ಎಂದು ಅವರು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅನೇಕ ಜನರು ಮತದಾನದ ಗುರುತಿನ ಚೀಟಿ ಇಲ್ಲದ ಕಾರಣ ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ. ಅರ್ಜಿಗಳಿಗೆ ಸರಿಯಾದ ದಾಖಲೆಗಳನ್ನು ಕೊಟ್ಟಿದ್ದರು ಸಹ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಈ ರೀತಿಯಾಗಿ ತಿರಸ್ಕರಿಸಿದ ಅರ್ಜಿಗಳನ್ನು ಯಾವ ಕಾರಣಕ್ಕಾಗಿ ತಿರಸ್ಕರಿಸಲಾಗಿದೆಂದು ಇಲ್ಲಿಯವರೆಗೂ ಅಧಿಕಾರಿಗಳು ತಿಳಿಸುತ್ತಿಲ್ಲ ಎಂದರು. ಡಿವೈಎಫ್ಐ ಮುಖಂಡರಾದ ಕಲ್ಯಾಣಯ್ಯ, ಯಲ್ಲಾಲಿಂಗ, ಕೆ. ರಮೇಶ್, ಕೆ.ಎಂ. ಸಂತೋಷ್, ಇ. ಮಂಜುನಾಥ, ತಿರುಕಪ್ಪ, ಕಲ್ಯಾಣಯ್ಯ, ಕೆ. ಹನುಮಂತ, ತಳವಾರ ಹುಲುಗಪ್ಪ, ಜೆ. ಶಿವಕುಮಾರ್, ಎಂ. ಹುಸೇನ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

