ಬಳ್ಳಾರಿ

ಯುವಕರು ಸೌಹಾರ್ದದಿಂದ ಇರಬೇಕು: ಕೊಟ್ರಪ್ಪ

Published On :

ಬಳ್ಳಾರಿ: ಸಂಸ್ಕೃತಿಯನ್ನು ವ್ಯಕ್ತಿತ್ವದಲ್ಲಿ ಮೈಗೂಡಿಸಿಕೊಂಡು ಸಮಾನತೆ ಮತ್ತು ಸೌಹಾರ್ದದಿಂದ ಬದುಕುವುದರ ಬಗ್ಗೆ ಯುವಕರು ಚಿಂತಿಸಬೇಕಾಗಿದೆ ಎಂದು ಗುಲ್ಬರ್ಗದ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೋರುನೂರು ಕೊಟ್ರಪ್ಪ ಹೇಳಿದರು. ನಗರದ ವೀರಶೈವ ಮಹಾವಿದ್ಯಾಲಯದಲ್ಲಿ ವಿವಿಧ ಸಾಂಸ್ಕೃತಿಕ ಸಂಘಗಳನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ನಂತರ ಅವರು ಮಾತನಾಡಿದರು. ಇತ್ತೀಚಿನ ದಿನಮಾನಗಳಲ್ಲಿ ಸಮೃದ್ಧಿಯನ್ನು ಸಾಧಿಸಿದ್ದರು ಕೂಡಾ ಸಂಸ್ಕೃತಿಯನ್ನು ಮರೆತಿರುವುದರಿಂದ ಜೀವನ ಮೌಲ್ಯರಹಿತವಾಗಿ ಹಲವಾರು ಅಪಾಯಕಾರಿ ಬೆಳವಣಿಗೆಗಳಿಗೆ ದಾರಿ ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದರು.  ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಲಭ್ಯವಿರುವ ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಸ್ಥಾನಕ್ಕೆ ಬೆಳೆಯಬೇಕು ಎಂದು ತಿಳಿಸಿದರು. ವೀ.ವಿ. ಸಂಘದ ಉಪಾಧ್ಯಕ್ಷ ಕೆ.ಎಂ.ಮಹೇಶ್ವರ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಹೋರಾಟದ ಮನೋಭಾವ ಬೆಳೆಸಿಕೊಂಡು ಆತ್ಮಸ್ಥೈರ್ಯದಿಂದ ಬದುಕುವುದನ್ನು ಕಲಿತುಕೊಳ್ಳಬೇಕೆಂದರು. ವೀ.ವಿ ಸಂಘದ ಕಾರ್ಯದರ್ಶಿ ಎಚ್.ಎಂ.ಗುರುಸಿದ್ದಸ್ವಾಮಿ, ಸಹ ಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ, ಆಡಳಿತ ಮಂಡಳಿಯ ಸದಸ್ಯರಾದ ಕೆ. ಶರಣಬಸವನಗೌಡ, ಆರ್. ಬಸವರಾಜ, ಕೆ.ಬಸವನಗೌಡ, ಪಪೂ ಕಾಲೇಜು ಪ್ರಾಚಾರ್ಯ ಎನ್. ರವಿಪ್ರಕಾಶ್ ಇದ್ದರು. ಕಲ್ಯಾಣಕುಮಾರ್ ಬಿಸಲಳ್ಳಿ ನಿರೂಪಿಸಿದರು. ಜಾನೆಕುಂಟೆ ಸಣ್ಣಬಸವರಾಜ ಸ್ವಾಗತಿಸಿದರು. ಪ್ರಾಚಾರ್ಯ ಪ್ರೊ. ಪಿ. ಬಸವರಾಜ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.