ಬಳ್ಳಾರಿ

ಲೋಕಸಭಾ ಚುನಾವಣೆಗೆ ಸಿದ್ಧ: ವಹಾಬ್

Published On :

ಹೊಸಪೇಟೆ: ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಸಂಘಟಿಸುವ ಜತೆಗೆ ಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕ ಮತಗಳು ಲಭಿಸುವಂತೆ ಮಾಡುವ ಮೂಲಕ ಜಯಗಳಿಸುವಂತೆ ಮಾಡಲು ಪಕ್ಷ ಸಕಲ ಸಿದ್ಧತೆ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ವಹಾಬ್ ಹೇಳಿದರು.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2014 ಅಥವಾ ಇದೇ ಡಿಸೆಂಬರ್ ಒಳಗಾಗಿ ಲೋಕಸಭಾ ಚುನಾವಣೆ ನಡೆದರು ಆಶ್ಚರ್ಯವಿಲ್ಲ. ಪಕ್ಷದಿಂದ ಚುನಾವಣೆಗೆ ಯಾರೆ ನಿಲ್ಲಲಿ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಲಾಗುತ್ತದೆ. ಈಗಾಗಲೆ ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗುತ್ತಿದೆ. ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಬಹುತೇಕ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಅಧಿಕಾರ ಹಿಡಿಯಲಿದೆ ಎಂದರು.
ಹೊಸಪೇಟೆ ನಗರಸಭೆಯ 35 ಸದಸ್ಯರ ಪೈಕಿ 20 ಸದಸ್ಯರು ಕಾಂಗ್ರೆಸ್ ಪಕ್ಷದವರಾಗಿದ್ದಾರೆ. ಓರ್ವ ಪಕ್ಷೇತರ ಸಹ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರಿಂದ ನಗರಸಭೆಯಲ್ಲಿ ಕಾಂಗ್ರೆಸ್ ಬಲ 21ಕ್ಕೇರಿದೆ. 7 ಮಹಿಳಾ ಸದಸ್ಯರಿದ್ದು, ಅವರಲ್ಲಿ ಇಬ್ಬರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು. ಅಲ್ಲದೇ ತಾಲೂಕಿನ ಕಮಲಾಪುರ ಪಪಂ ಹಾಗೂ ಕಂಪ್ಲಿ ಪುರಸಭೆಯಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿಗಳೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಳ್ಳಲಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ್ ಮಾತನಾಡಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಜಿ.ಕೆ. ಹನುಮಂತಪ್ಪ, ಎಚ್.ಎನ್.ಎಫ್. ಇಮಾಂ ನಿಯಾಜಿ, ಡಿ. ವೆಂಕಟರಮಣ, ತಾರಿಹಳ್ಳಿ ಶಿವಮೂರ್ತಿ, ಅಬೀದ್ ಹುಸೇನ್, ಗುಜ್ಜಲ್ ಶಿವರಾಮಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.