ಶಕ್ತಿವಂತ ಸಾಹಿತಿ, ವ್ಯಕ್ತಿಗಳ ಹಿಂದೆ ಬೆಂಬಲಿಗರಿಲ್ಲ: ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಖೇದ
ಬಳ್ಳಾರಿ: ಇಂದು ರಾಜಕಾರಣಿಗಳಿಗೆ ಹಾಗೂ ಸ್ವಾಮೀಜಿಗಳಿಗೆ ಬೆಂಬಲಿಗರು ಇರುತ್ತಾರೆ. ಆದರೆ, ಒಂದು ಶಕ್ತಿಯಾಗಿ ಎಲ್ಲರ ಜೀವನಕ್ಕೆ ದಾರಿದೀಪಗಳಾಗಿರುವ ಸಾಹಿತಿಗಳ ಹಿಂದೆ ಯಾವುದೇ ವ್ಯಕ್ತಿಗಳಿಲ್ಲ ಎಂದು ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಖೇದ ವ್ಯಕ್ತಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು ಜಂಟಿಯಾಗಿ ನಗರದ ಅಲ್ಲಂ ಕರಿಬಸಪ್ಪ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಿ. ಲಂಕೇಶ್ ಒಂದು ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಜನರು ಹಿಂಬಾಲಕರಾಗಿ ರಾಜಕಾರಣಿಗಳು, ಸ್ವಾಮೀಜಿಗಳ ಹಿಂದೆ ಹೋಗುತ್ತಾರೆ. ಆದರೆ, ದಾರಿದೀಪಗಳಾಗಿರುವ ಶಕ್ತಿ, ವ್ಯಕ್ತಿಗಳಿಂದೆ ಹೋಗದಿರುವುದು ಆತಂಕದ ಸಂಗತಿ. ಇಂದಿನ ದಿನಗಳಲ್ಲಿ ಉತ್ತಮ ವ್ಯಕ್ತಿ ಹಾಗೂ ಶಕ್ತಿಗಳಿಂದ ಹಿಂಬಾಲಕರು ಇಲ್ಲವಾಗಿದ್ದಾರೆ. ಇದು ಇಂದಿನ ಸಮಾಜಕ್ಕೆ ದಾರಿದೀಪಗಳಾಗುವ ಶಕ್ತಿಗಳ ಕೊರತೆ ಇದೆ ಎಂದೆನಿಸುತ್ತದೆ ಎಂದರು. ಕವಿ ಬಿ.ಆರ್. ಲಕ್ಷ್ಮಣರಾವ್ ಮಾತನಾಡಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ. ಅರವಿಂದ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವೀ.ವಿ. ಸಂಘದ ಉಪಾಧ್ಯಕ್ಷ ಮಹೇಶ್ವರಯ್ಯ ಸ್ವಾಮಿ, ಪನ್ನರಾಜ್, ಕಲ್ಲುಕಂಬ ಪಂಪಾಪತಿ ಇದ್ದರು. ಕಸಾಪ ಜಿಲ್ಲಾಧ್ಯಕ್ಷ ಸಿರಿಗೇರಿ ಎರ್ರಿಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಗೌರವ ಕಾರ್ಯದರ್ಶಿ ಬಾದಾಮಿ ಶಿವಲಿಂಗ ಹಾಗೂ ಈರಮ್ಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

