ಬಳ್ಳಾರಿ

ಇಂದು ಬಿಜೆಪಿ ಪ್ರತಿಭಟನೆ

Published On :

ಹಗರಿಬೊಮ್ಮನಹಳ್ಳಿ: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಸೆ. 7ರಂದು ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರಾಧ್ಯಕ್ಷ ಕೆ. ರೋಹಿತ್ ತಿಳಿಸಿದ್ದಾರೆ. ಕೇಂದ್ರದ ಯುಪಿಎ ಸರ್ಕಾರದ ನಿರ್ಲಕ್ಷ್ಯ, ಆಡಳಿತದಿಂದ ದೇಶದ್ಯಾದಂತ ಜನ ಸಾಮಾನ್ಯರೆಲ್ಲರೂ ತೊಂದರೆಗೀಡಾಗುವ ಪರಿಸ್ಥಿತಿ ಒದಗಿ ಬಂದಿದೆ. ತಿಂಗಳಲ್ಲಿ ಕೇಂದ್ರ ಸರ್ಕಾರ 6 ಬಾರಿ ಪೆಟ್ರೋಲ್, ಡೀಸೆಲ್, ಸೀಮೆಎಣ್ಣೆ, ಗ್ಯಾಸ್ ದರ ಏರಿಕೆಯಿಂದ ದೇಶದ ಪ್ರಜೆಗಳು ಜೀವನ ನಡೆಸುವುದು ಕಷ್ಟಕರವಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು, ರುಪಾಯಿ ಮೌಲ್ಯ ಕುಸಿತದಿಂದ ದೇಶ ಅಭದ್ರತೆಯಲ್ಲಿ ಸಾಗುತ್ತಿದೆ. ಆಹಾರ ಭದ್ರತೆ ಕಾಯ್ದೆ ಜಾರಿ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಯಿಂದ ಜನರ ಜೀವನ ದುಬಾರಿಯಾಗಿದೆ. ಈ ಎಲ್ಲ ಅಂಶಗಳನ್ನಿಟ್ಟುಕೊಂಡು ಪಟ್ಟಣದ ಈಶ್ವರ ದೇವಸ್ಥಾನದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಪಕ್ಷದ ಹಿರಿಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಎಲ್ಲ ಕಾರ್ಯಕರ್ತರು ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ವಿಷಪೂರಿತ ಆಹಾರ ಸೇವನೆ: ರೈತ ಸಾವು
ಬಳ್ಳಾರಿ: ಹೊಲಕ್ಕೆ ಕ್ರಿಮಿನಾಶಕ ಸಿಂಪಡಿಸಿ, ಸರಿಯಾಗಿ ಕೈ ತೊಳೆಯದೆ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ರೈತನೋರ್ವ ಶುಕ್ರವಾರ ಮೃತಪಟ್ಟಿರುವ ಘಟನೆ ಜರುಗಿದೆ. ತಾಲೂಕಿನ ಗೊಲ್ಲನಾಯಕನಹಳ್ಳಿ ನಿವಾಸಿ ಮಲ್ಲಯ್ಯ (30) ಎಂಬಾತನೇ ಸಾವನ್ನಪ್ಪಿದ ರೈತ. ಈತನು ಗುರುವಾರ ತನ್ನ ಹೊಲದಲ್ಲಿ ಕ್ರಿಮಿನಾಶಕ ಸಿಂಪಡಿಸಿ, ಸರಿಯಾಗಿ ಕೈತೊಳೆದುಕೊಳ್ಳದೆ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ. ಕೂಡಲೇ ಈತನನ್ನು ಚಿಕಿತ್ಸೆಗೆಂದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೆ ಶುಕ್ರವಾರ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.