ಮೊದಲ ಸ್ಥಾನಕ್ಕೆ ತನ್ನಿ: ಶಾಸಕ
ಹಗರಿಬೊಮ್ಮನಹಳ್ಳಿ: ಪರಿಶ್ರಮ, ಶ್ರದ್ಧ್ದೆಯಿಂದ ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದು ಜಿಲ್ಲೆಯ ಶೈಕ್ಷಣಿಕ ರಂಗದ ಪ್ರಗತಿಯಲ್ಲಿ 2ನೇ ಸ್ಥಾನದಲ್ಲಿರುವ ತಾಲೂಕನ್ನು ಮೊದಲ ಸ್ಥಾನಕ್ಕೇರಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದ್ದು, ಚೆನ್ನಾಗಿ ಅಭ್ಯಾಸ ಮಾಡಿ ತಾಲೂಕಿನ ಕೀರ್ತಿ ಹೆಚ್ಚಿಸಬೇಕು ಎಂದು ಶಾಸಕ ಎಸ್. ಭೀಮಾನಾಯ್ಕ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬುಧವಾರ ಮಧ್ಯಾಹ್ನ ಪಟ್ಟಣದ ಗಂ.ಭೀ. ಸರ್ಕಾರಿ ಪದವಿಪೂರ್ವ ಕಾಲೇಜಿನ 2013-14ನೇ ಸಾಲಿನ ಸರಸ್ವತಿ ಪೂಜೆ, ಸಾಂಸ್ಕೃತಿಕ, ಕ್ರೀಡಾ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ಅನ್ಯ ವಿಷಯಗಳತ್ತ ಹೆಚ್ಚು ಗಮನ ಹರಿಸುವ ಬದಲು ಗುಣಮಟ್ಟದ ಬೋಧನೆ ವಿಚಾರಕ್ಕೆ ಹೆಚ್ಚು ಅದ್ಯತೆ ನೀಡಿ, ಕ್ಲಾಸ್ರೂಂಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಮೂಡಿಸಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಸಾಧ್ಯ. ನಿಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಶಿಕ್ಷಕ, ಉಪನ್ಯಾಸಕರಿಗೆ ಮನವಿ ಮಾಡಿದರು.
ಪ್ರಾಚಾರ್ಯ ಕೆ. ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಪ್ರಭಾರಿ ಅಧ್ಯಕ್ಷೆ ಮಮತಾ ಸುರೇಶ, ಕಾಲೇಜು ಆಡಳಿತ ಮಂಡಳಿ ಉಪಾಧ್ಯಕ್ಷ ಸಿನಿಮಾ ಮಂಜಣ್ಣ, ತಾಪಂ ಸದಸ್ಯರಾದ ಉಪ್ಪಾರ ಬಾಲಪ್ಪ, ಭಾರತಮ್ಮ ಬೆಲ್ಲದ್, ಪವಾಡಿ ಗಂಗಮ್ಮ, ಕಡ್ಲಬಾಳ ಗ್ರಾಪಂ ಅಧ್ಯಕ್ಷೆ ಬಡಲಡಿಕಿ ಮಂಜುಳಾ, ಚಿಂತ್ರಪಳ್ಳಿ ಗ್ರಾಪಂ ಅಧ್ಯಕ್ಷ ಎಂ. ಆನಂದ್, ಹಂಚಿನಮನಿ ಹನುಮಂತಪ್ಪ, ಎಚ್. ಜಂದೀಸಾಬ್, ಸಿ.ಎಂ. ರಾಮಣ್ಣ, ಎಂ. ಮಹಾದೇವಪ್ಪ, ತಾಪಂ ಮಾಜಿ ಸದಸ್ಯ ದೇವೆಂದ್ರಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು. ಉಪನ್ಯಾಸಕ ಗೂಳೆಪ್ಪ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

