ಸಮಾಜ ನಿರ್ಮಾಣಕ್ಕೆ ಸಂಸ್ಥೆಗಳ ಸಹಕಾರ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಸೆ. 6
ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಮೂಲಕ ಉತ್ತಮ ಸಮಾಜ ನಿಮಾರ್ಣಕ್ಕೆ ಅಪಾರ ಕೊಡುಗೆ ನೀಡಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದರು.
ಇಲ್ಲಿನ ವಿಜಯನಗರ ಮಹಾವಿದ್ಯಾಲಯದ 2013-14ನೇ ಶೈಕ್ಷಣಿಕ ವರ್ಷದ ಸರ್ವಸಂಘ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಉತ್ತಮ ಭವಿಷ್ಯ ನಿರ್ಮಾಣ ಮಾಡುವ ಜತೆಗೆ ಮಕ್ಕಳನ್ನು ಬೌದ್ಧಿಕ, ಮಾನಸಿಕ ಮತ್ತು ಸದೃಢವಾಗಿ ರೂಪಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು, ಶಾಲಾ- ಕಾಲೇಜುಗಳು ಮಾಡಬೇಕಿದೆ. ಉತ್ತರ ಕರ್ನಾಟಕದಲ್ಲಿ ವಿಜಯನಗರ ಮಹಾವಿದ್ಯಾಲಯ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ಇಡೀ ರಾಜ್ಯದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಶ್ರದ್ಧೆ ಇರಲಿ
ಮಕ್ಕಳು ವಿದ್ಯೆ ಕಲಿಯುವ ವಯಸ್ಸಿನಲ್ಲಿ ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕಲಿಯಬೇಕು. ಆಡುವ ವಯಸ್ಸಿನಲ್ಲಿ ಆಡಬೇಕು. ಆದರೆ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸುವ ದಾರಿಯಲ್ಲಿ ಸಾಗಬೇಕು ಎಂದರು.
ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ, ವಿಜಯನಗರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯಸ್ವಾಮಿ, ಕಾಲೇಜಿನ ಹಳೆಯ ವಿದ್ಯಾರ್ಥಿ ಹಾಗೂ ಸಚಿವೆ ಉಮಾಶ್ರೀ ಅವರ ಆಪ್ತ ಕಾರ್ಯದರ್ಶಿ ಸಯಿದ್ ಏಜಾಜ್ ಅಹ್ಮದ್, ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೀ.ವಿ. ಸಂಘದ ಸಹ ಕಾರ್ಯದರ್ಶಿ ಜೆ. ಎಸ್. ನೇಪಾಕ್ಷಪ್ಪ, ಸಂಘದ ಮುಖಂಡ ಅರಳಿ ಬಸವನಗೌಡ, ವಿಜಯನಗರ ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಗುಡೆಕೋಟೆ ನಾಗರಾಜ, ಎಂ. ವಿರೂಪಾಕ್ಷಯ್ಯ, ಎಂ. ವಿಜಯಕುಮಾರ ಗೌಡ, ವೀರೇಶ್ ಜವಳಿ, ಪ್ರಾಚಾರ್ಯ ಪ್ರೊ. ಎಸ್.ಎಸ್. ಪೊಲೀಸ್ಪಾಟೀಲ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ವಿಜಯ ಗುಳಲಕಾಯಿ ಉಪಸ್ಥಿತರಿದ್ದರು. ರಾಗಶ್ರೀ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಎಸ್.ಎಸ್. ಪೊಲೀಸ್ ಪಾಟೀ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕ ಡಾ. ಉಮಾಪತಿ ಪತ್ತಾರ ಪರಿಚಯಿಸಿದರು. ಪ್ರೊ. ಅಶೋಕ್ ಕುಮಾರ್ ಪತ್ತಾರ ವಂದಿಸಿದರು. ಡಾ.ಎಸ್.ವೈ. ತಿಮ್ಮಾರೆಡ್ಡಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

