ಮಾಧ್ಯಮದವರಿಗೆ ಮೂಲಸೌಕರ್ಯ ನೀಡಿ
ಬಳ್ಳಾರಿ: ರಾಜ್ಯ ಸರ್ಕಾರವು ಸುದ್ದಿ, ಮಾಧ್ಯಮಗಳ ಪ್ರತಿನಿಧಿಗಳಿಗೆ ಮೂಲಸೌಕರ್ಯ ಒದಗಿಸಬೇಕು ಎಂದು ಅಖಿಲ ಭಾರತ ಜನಗಣ ಒಕ್ಕೂಟದ ರಾಷ್ಟ್ರೀಯ ಸಂಚಾಲಕ ಜಿ. ಗಂಗಿರೆಡ್ಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸುದ್ದಿ, ಮಾಧ್ಯಮಗಳ ಮಿತ್ರರಿಗೆ ಉಚಿತ ನಿವೇಶನ ನೀಡಬೇಕು. ಸರ್ಕಾರದಿಂದ ಮಾಸಾಶನ ನೀಡಬೇಕು. ಬಿಪಿಎಲ್ ಪಡಿತರ ಚೀಟಿ, ವಿಮಾ ಸೌಲಭ್ಯ ಕಲ್ಪಿಸಬೇಕು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯಕೀಯ ಸೇವೆ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಸಮಾಜದಲ್ಲಿ ಪ್ರತಿನಿತ್ಯವೂ ನಡೆಯುವ ಘಟನೆಗಳನ್ನು ಜನರಿಗೆ ತಿಳಿಸಿ, ಸಮಾಜವನ್ನು ಸದಾ ಜಾಗೃತಗೊಳಿಸುವಲ್ಲಿ ಪತ್ರಕರ್ತರ, ಮಾಧ್ಯಮದವರ ಪಾತ್ರ ಅತ್ಯಂತ ಗಣನೀಯ. ಈ ನಿಟ್ಟಿನಲ್ಲಿ ಸುದ್ದಿ, ಮಾಧ್ಯಮದವರಿಗೆ ರಕ್ಷಣೆ ಹಾಗೂ ಮೂಲಸೌಕರ್ಯ ಒದಗಿಸಲು ರಾಜ್ಯ ಸರ್ಕಾರವು ಮುಂದಾಗಬೇಕು ಎಂದ ಅವರು, ಈ ಬಗ್ಗೆ ಜಿಲ್ಲಾ ವಾರ್ತಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ವಾರ್ತಾ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಪ್ರತ್ಯೇಕ ರಾಜ್ಯದ ಬೇಡಿಕೆ: ರಾಜ್ಯದ ಬೀದರ್, ಗುಲ್ಬರ್ಗಾ, ಬಿಜಾಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ ಸೇರಿದಂತೆ ಒಟ್ಟು 11 ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು. ಈ ಜಿಲ್ಲೆಗಳು ಕೃಷಿ, ಉದ್ಯೋಗ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದಿದ್ದು, ಇವುಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

