ಉತ್ತಮ ಸ್ಥಾನ ಗಳಿಸುವುದೇ ಗುರು ಕಾಣಿಕೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ. 10
ನಿರಂತರ ಅಧ್ಯಯನ ಮಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಸ್ಥಾನಗಳಿಸುವುದೇ ಶಿಕ್ಷಕರಿಗೆ ನೀಡುವ ಗೌರವ ಹಾಗೂ ಗುರು ಕಾಣಿಕೆ ಎಂದು ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಪ್ರೊ.ಡಿ. ಗಂಗಣ್ಣ ವಿದ್ಯಾರ್ಥಿಗಳಿಗೆ ತಿಳಿಸಿದರು.
ನಗರದ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನ ಅನುಭವಿಸಲು ಕೇವಲ ಕಾಲೇಜಿಗೆ ಬಂದೆ, ಪಾಠ ಕೇಳಿದೆ, ಮನೆಗೆ ಹೋದೆ ಎಂಬಂತಿರಬಾರದು. ಬೋಧಿಸಿದ ಪಾಠಗಳನ್ನು ಮನೆಗಳಲ್ಲಿ ಮತ್ತೊಮ್ಮೆ ಓದಬೇಕು. ವಿದ್ಯಾರ್ಥಿಗಳು ನಿರಂತರ ಕಲಿಕೆಯಲ್ಲಿ ತೊಡಗಬೇಕು. ಆಗ ಮಾತ್ರ ತಮ್ಮ ನೆಲೆಯನ್ನು ಗಟ್ಟಿಗೊಳಿಸಿಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.
ಉತ್ತಮ ಸ್ಥಾನ ಅಲಂಕರಿಸಿ: ಮೈಸೂರು ವಿಶ್ವವಿದ್ಯಾಲಯ ರಾಜ್ಯ ವಿವಿಗಳ ಅರ್ಹತಾ (ಕೆ-ಸೆಟ್) ಪರೀಕ್ಷೆ ಆಯೋಜಿಸಿದೆ. ಕನ್ನಡದಲ್ಲಿ ಬರೆಯಬಹುದಾದ ಈ ಅರ್ಹತಾ ಪರೀಕ್ಷೆ ಎದುರಿಸಿದವರಲ್ಲಿ ಶೇ. 4ರಷ್ಟು ಅರ್ಹರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಪರಿಶ್ರಮ ಪಡಬೇಕಿದ್ದು, ಪರೀಕ್ಷೆ ಎದುರಿಸಲು ಬೇಕಾದ ತರಬೇತಿ, ಪುಸ್ತಕ, ಇತರೆ ಎಲ್ಲ ಸೌಲಭ್ಯಗಳನ್ನು ಕಾಲೇಜಿನಲ್ಲಿ ನೀಡಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕಠಿಣ ಪರಿಶ್ರಮದಿಂದ ಉತ್ತಮ ಸ್ಥಾನ ಅಲಂಕರಿಸಬೇಕು ಎಂದರು.
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕುರಿತು ಉಪನ್ಯಾಸ ನೀಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಬಿ. ಶ್ರೀನಿವಾಸ ಮೂರ್ತಿ, ರಾಧಾಕೃಷ್ಣನ್ ಅವರ ತತ್ವ, ಆದರ್ಶ, ಶಿಸ್ತು, ಸಂಯಮವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಡಾ. ವೀರರಾಘವಲು, ರಾಜ್ಯಶಾಸ್ತ್ರ ವಿಭಾಗದ ಸಂಯೋಜಕಿ ಡಾ.ಬಿ. ಸರೋಜ, ಉಪನ್ಯಾಸಕ ಡಾ.ಟಿ. ವೀರಭದ್ರಪ್ಪ, ಜನಾರ್ದನ ರೆಡ್ಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಮನೋಹರನ್, ಚನ್ನಬಸಯ್ಯ, ನಾಗೇಂದ್ರ, ರಾಮಾಂಜನೇಯಲು, ಕೊಟ್ರಪ್ಪ, ಡಾ.ಕೆ. ಬಸಪ್ಪ, ಕಾವಲಯ್ಯ, ಸೋಮನಾಥ್, ಅತಿಥಿ ಉಪನ್ಯಾಸಕ ರುದ್ರಮುನಿ, ದುರುಗಪ್ಪ, ಸಿದ್ದೇಶ್ ಸೇರಿದಂತೆ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರಾಜ್ಯಶಾಸ್ತ್ರ ವಿದ್ಯಾರ್ಥಿ ಟಿ. ರವೀಂದ್ರ ಸ್ವಾಗತಿಸಿದರು. ಮಲ್ಲಪ್ಪ ಯರಗುಂಟೆ ನಿರೂಪಿಸಿದರು. ನರಸಿಂಹಲು ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

